ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಮೈತ್ರಿ ಸರ್ಕಾರ : ಡಿ.ಕೆ.ಶಿವಕುಮಾರ್

Kannadaprabha News   | Asianet News
Published : Jan 26, 2021, 08:06 AM IST
ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಮೈತ್ರಿ ಸರ್ಕಾರ :  ಡಿ.ಕೆ.ಶಿವಕುಮಾರ್

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆ ಹಿಂದಿನ ವಿಚಾರವೇನು..?

ಮೈಸೂರು (ಜ.26): ‘ಇದು ಕಾಂಗ್ರೆಸ್‌- ಬಿಜೆಪಿ ಮೈತ್ರಿ ಸರ್ಕಾರ. ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ. ಕಾಂಗ್ರೆಸ್‌- ಬಿಜೆಪಿ ಸರ್ಕಾರ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು.

 ಸೋಮವಾರ ನಗರದಲ್ಲಿ ಮಾತನಾಡಿದ ಅವರು, ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. 

'ಈ ಸರ್ಕಾರ ಬಲಿಷ್ಠವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದಾರೆ'

ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಕುಟುಕಿದರು. ಈ ಸರ್ಕಾರ ಬಲಿಷ್ಠವಾಗಿದೆ. ಸರ್ಕಾರಕ್ಕೆ ಬಹಳಷ್ಟುಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೂ ಗೊಂದಲವಿಲ್ಲ. 

ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು ಎನ್ನುವ ಮೂಲಕ ಸರ್ಕಾರದ ಸಂಪುಟ ಪುನರಚನೆ ಹಾಗೂ ಖಾತೆ ಹಂಚಿಕೆ ಗೊಂದಲದ ಬಗ್ಗೆ ಲೇವಡಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ