'ಕೊರೋನಾ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ'

Published : Apr 10, 2021, 03:50 PM IST
'ಕೊರೋನಾ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ'

ಸಾರಾಂಶ

ಕೊರೋನಾ ಎರಡನೇ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದಕ್ಕೆ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಳಗಾವಿ, (ಏ.10): ಕೋವಿಡ್ ಹಗಲಲ್ಲಿ ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದರೂ ತಿಳಿಸಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಇಂದು ( ಶನಿವಾರ) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದಾರೆ. ರಾತ್ರಿ ಕರ್ಫ್ಯೂಯಿಂದ  ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೋವಿಡ್ ಹರಡುವುದಿಲ್ಲವೇ? ಇವೆಲ್ಲ ಅವೈಜ್ಞಾನಿಕ ನಿರ್ಧಾರಗಳು ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿಕಾರಿದರು.

ಇಂದು ರಾತ್ರಿಯಿಂದ ರಾಜ್ಯದ 8 ನಗರದಲ್ಲಿ ಕೊರೋನಾ ಕರ್ಫ್ಯೂ! 

ಇನ್ನು ಸಾರಿಗೆ ನೌಕರರ ಮುಷ್ಕರರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಲಕ್ಷ್ಮಣ ಸವದಿ ಸಾರಿಗೆ ಮಂತ್ರಿ ಆದಾಗಿನಿಂದ ಕೈಗೊಂಡ ನಿರ್ಧಾರಗಳೆಲ್ಲವೂ ತಪ್ಪಾಗಿವೆ. ನೌಕರರು ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಮೊದಲು ಆ ನೌಕರರಿಗೆ ಸಂಬಳ ಕೊಡುವುದಕ್ಕೆ ಹೇಳಿ ಎಂದು ತಿರುಗೇಟು ನೀಡಿದರು.

ಸತೀಶ್ ಜಾರಕಿಹೊಳಿ ದೊಡ್ಡ ನಾಯಕ. ಅವರು ಮೌಢ್ಯಗಳ ವಿರುದ್ಧ ಹೋರಾಡುತ್ತಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ನಂಬಿಕೆ ಇರುತ್ತದೆ ಎಂದರು. ಬೆಳಗಾವಿಯಲ್ಲಿ ಸತೀಶ್ ಗೆದ್ದೇ ಗೆಲ್ಲುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ