ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೊರೋನಾ ಸೋಂಕು!

By Suvarna NewsFirst Published Aug 25, 2020, 1:26 PM IST
Highlights

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ| ರಾಜಕಾರಣಿಗಳಿಗೂ ತಗುಲಿದ ಕೊರೋನಾ| ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೂ ಕೊರೋನಾ

ಬೆಂಗಳೂರು(ಆ.25): ರಾಜ್ಯದಲ್ಲಿ ಕೊರೋನಾ ಆತಂಕ ದಿನೇ ದಿನೇ ಹೆಚ್ಚುತ್ತಿದ್ದು, ಸದ್ಯ ರಾಜಕಾರಣಿಗಳಲ್ಲೂ ಈ ಮಹಾಮಾರಿ ಕಾಣಿಸಿಕೊಳ್ಳಲಾರಂಭಿಸಿದೆ. ಸಿಎಂ ಯಡಿಯೂರಪ್ಪ, ಶ್ರೀರಾಮುಲು, ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೂ ಕೊರೋನಾ ಸೋಂಕು ದೃಢಪಟ್ಟಿದೆ.

Karnataka Congress State President DK Shivakumar says he has tested positive for .

He has been admitted to a private hospital in Bengaluru. pic.twitter.com/j3kWTLxS4X

— ANI (@ANI)

ಸದ್ಯ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ ಎಂದ ಬಿಜೆಪಿ ಎಂಎಲ್‌ಸಿ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ.

— H D Kumaraswamy (@hd_kumaraswamy)

ಡಿಕೆಶಿಗೆ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.

click me!