
ಬೆಂಗಳೂರು(ಮಾ.09): ಗೋವಾ ಚುನಾವಣೋತ್ತರ ಸಮೀಕ್ಷೆಯ ವರದಿಗಳಲ್ಲಿ ಅತಂತ್ರ ಫಲಿತಾಂಶದ ಸುಳಿವು ಸಿಕ್ಕಿರುವ ಬೆನ್ನಲ್ಲೇ ಹೈಕಮಾಂಡ್ ಸೂಚನೆಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(DK Shivakumar) ಅವರು ಗೋವಾಗೆ(Goa) ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ(Assembly Elections) ಕಾಂಗ್ರೆಸ್(Congress) ಹೆಚ್ಚು ಸ್ಥಾನ ಗೆದ್ದರೂ ಸರ್ಕಾರ ರಚಿಸಲು ವಿಫಲವಾಗಿತ್ತು. ಈ ಬಾರಿ ಹಾಗಾಗದಂತೆ ಎಚ್ಚರವಹಿಸಲು ಹಾಗೂ ಕಾಂಗ್ರೆಸ್‌ನಿಂದ ಗೆದ್ದವರು ಪಕ್ಷಾಂತರ ಮಾಡದಂತೆ ನಿಗಾ ವಹಿಸಲು, ಸರ್ಕಾರ ರಚನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ ಡಿ.ಕೆ. ಶಿವಕುಮಾರ್ ಅವರನ್ನು ಗೋವಾಗೆ ಕಳುಹಿಸಲಾಗುತ್ತಿದೆ. ಅಲ್ಲದೆ ಅತಂತ್ರ ಸ್ಥಿತಿ ಎದುರಾದರೆ ‘ಕಿಂಗ್‌ಮೇಕರ್’(King Maker)ಶಾಸಕರ ಜತೆ ಮಾತನಾಡುವ ಹೊಣೆಯನ್ನು ಡಿಕೆಶಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Exit Poll 2020: ಉ.ಪ್ರ.ಕ್ಕೆ ಮತ್ತೆ ಯೋಗಿ, ಪಂಜಾಬ್‌ಗೆ ಆಪ್?
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಹೌದು ಗೋವಾಗೆ ತೆರಳಲು ಹೈಕಮಾಂಡ್ ಸೂಚನೆ ನೀಡಿದೆ. ಚುನಾವಣೆ ಪ್ರಚಾರದ ವೇಳೆ ನಾನು ಕೂಡ ಅಲ್ಲಿಗೆ ಹೋಗಿ ಪ್ರಚಾರ ಮಾಡಿದ್ದೆ. ರಾಜ್ಯದಿಂದ ತಂಡ ಕಳೆದ ಒಂದು ತಿಂಗಳಿಂದಲೂ ಅಲ್ಲಿ ಶ್ರಮಿಸುತ್ತಿದೆ. ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಕಾರ್ಯಕರ್ತನಾಗಿ ಅಲ್ಲಿ ಶ್ರಮಿಸಲು ಹಾಗೂ ಅಲ್ಲಿನ ನಮ್ಮ ಸಹೋದ್ಯೋಗಿಗಳಿಗೆ ಬೆಂಬಲವಾಗಿ ನಿಲ್ಲಲು ನಾನು ಗೋವಾಗೆ ತೆರಳುತ್ತಿದ್ದೇನೆ. ಗೋವಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲೇ ಪಕ್ಷ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.
ಚುನೋವಣೋತ್ತರ ಸಮೀಕ್ಷೆ ವರದಿ ಬಗ್ಗೆ ಪ್ರತಿಕ್ರಿಯಿಸಿ, ‘ನಾವು ಚುನಾವಣೋತ್ತರ ಸಮೀಕ್ಷೆಗಿಂತ ವಾಸ್ತವದ ಮೇಲೆ ಹೆಚ್ಚು ನಂಬಿಕೆ ಇಟ್ಟಿದ್ದೇವೆ. ಉತ್ತರ ಪ್ರದೇಶ(Uttar Pradesh) ಹೊರತಾಗಿ ಗೋವಾ, ಪಂಜಾಬ್(Punjab), ಉತ್ತರಾಖಂಡದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ’ ಎಂದರು.
ಗೋವಾದಲ್ಲಿ ರೆಸಾರ್ಟ್ ರಾಜಕೀಯ ಶುರು!
ಗೋವಾದಲ್ಲಿ (Goa) ಯಾರಿಗೂ ಬಹುಮತ ಬಾರದೇ ಹೋಗಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು (Exit Poll ) ಸುಳಿವು ನೀಡಿರುವ ಹಿನ್ನೆಲೆಯಲ್ಲಿ, ಸರ್ಕಾರ ರಚನೆಗೆ ಈಗಿನಿಂದಲೇ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಪಕ್ಷಗಳು ಕಸರತ್ತು ಆರಂಭಿಸಿವೆ.
ಕಾಂಗ್ರೆಸ್ ಪಕ್ಷದವರು ಎಲ್ಲ ಅಭ್ಯರ್ಥಿಗಳನ್ನು ಗೋವಾದ ರೆಸಾರ್ಟ್ (Resort) ಒಂದರಲ್ಲಿ ಕೂಡಿ ಹಾಕಿದ್ದು, ಗೆದ್ದ ನಂತರ ತಮ್ಮವರ ಕುದುರೆ ವ್ಯಾಪಾರ ಆಗದಂತೆ ನೋಡಿಕೊಳ್ಳುವ ಉದ್ದೇಶ ಹೊಂದಿದ್ದಾರೆ. ಇದೇ ವೇಳೆ, ‘ಬಿಜೆಪಿ ವಿರೋಧಿಗಳಾದ ಆಪ್ (AAP), ಟಿಎಂಸಿ (TMS) ಯಾರೇ ಆಗಲಿ ಅವರ ಜತೆ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಮೈತ್ರಿಗೆ ಸಿದ್ಧ’ ಎಂದು ಪಕ್ಷದ ಗೋವಾ ಪ್ರಭಾರಿ, ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡೂರಾವ್ (Dinesh Gundu Rao) ಹೇಳಿದ್ದಾರೆ. ಈ ಮೂಲಕ ತನ್ನ ಆಪ್, ಟಿಎಂಸಿ ವಿರೋಧಿ ನೀತಿಯನ್ನು ಕಾಂಗ್ರೆಸ್ ಸಡಿಲಿಸಿದೆ.
ಮತ್ತೊಂದೆಡೆ ಟಿಎಂಸಿ ರಾಜ್ಯ ಅಧ್ಯಕ್ಷ ಕಿರಣ್ ಕಾಕೋಂಡ್ಕರ್ ಅವರು ‘ಟಿಎಂಸಿ-ಎಂಜಿಪಿ ಮೈತ್ರಿಗೆ ರಾಜ್ಯದಲ್ಲಿ 11 ಸ್ಥಾನ ಬರಲಿವೆ. ನಮ್ಮ ಬೆಂಬಲ ಬಯಸಿದವರ ಜತೆ ನಂತರ ಸಮಾಲೋಚನೆ ಮಾಡಲಿದ್ದೇವೆ’ ಎಂದಿದ್ದಾರೆ. ರಾಜ್ಯಕ್ಕೆ ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಡೆರಿಕ್ ಓ’ಬ್ರಿಯಾನ್, ಟಿಎಂಸಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashanth Kishore) ಕೂಡ ಆಗಮಿಸಿದ್ದಾರೆ.
ಮೋದಿ ಭೇಟಿಯಾದ ಸಾವಂತ್: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ( Goa CM Pramod Sawant ) ದಿಲ್ಲಿಗೆ ತೆರಳಿ ತಮ್ಮ ಸರ್ಕಾರ ರಚನೆ ಕಾರ್ಯತಂತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Prime Minister Modi) ಅವರ ಜತೆ ಹಾಗೂ ಮುಂಬೈನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Maharastra Former CM Devendra Fadnevis ) ಜತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ‘ಎಂಜಿಪಿ ಜತೆ ಮೈತ್ರಿಗೆ ಬಿಜೆಪಿ ಸಿದ್ಧ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.