ಕಾಂಗ್ರೆಸ್‌ನಲ್ಲಿ ಆಂತರಿಕ ಬೆಳವಣಿಗೆ: ಸೋನಿಯಾಗೆ ಪತ್ರ ಬರೆದ ಡಿಕೆಶಿ

By Suvarna NewsFirst Published Aug 23, 2020, 10:53 PM IST
Highlights

ಕಾಂಗ್ರೆಸ್‌ನಲ್ಲಿ ನಾಯಕತ್ವದ ಬದಲಾವಣೆ ಕೂಗು ಎದ್ದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು  ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು, (ಆ.23): ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಾಗುತ್ತಿರುವ ಆಂತರಿಕ ಬೆಳವಣಿಗೆಗಳು ಹಾಗೂ ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಅಭಿಪ್ರಾಯವನ್ನು ಪತ್ರದ ಮೂಲಕ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ.

ಕಾಂಗ್ರೆಸ್ ಕಷ್ಟದಲ್ಲಿದ್ದಾಗ ನೀವು ನಾಯಕತ್ವ ವಹಿಸಿಕೊಂಡು ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ತಂದಿದ್ರಿ. ನಿಮಗೆ ಪ್ರಧಾನಿ ಆಗುವ ಅವಕಾಶ ಇದ್ರೂ, ತ್ಯಾಗ ಮಾಡಿದ್ರಿ. ಪಕ್ಷದ ನಾಯಕತ್ವ ನೀವೇ ವಹಿಸಿಕೊಂಡ್ರೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಅನ್ನೋ ವಿಶ್ವಾಸ ನಮಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಇದು ನನ್ನ ಅಭಿಪ್ರಾಯ ಎಂದು ಡಿಕೆ ಶಿವಕುಮಾರ್ ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ಕೂಗು: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಕರ್ನಾಟಕ ಕಾಂಗ್ರೆಸ್

ಇಂದಿರಾಜೀ ಹಾಗೂ ರಾಜೀವ್ ಜೀ ನಂತರ, ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ನಾಯಕತ್ವ ವಹಿಸಲು ಯಾರೂ ಇಲ್ಲದಿದ್ದಾಗ, ಪಕ್ಷ ಅತ್ಯಂತ ಸಂಕಷ್ಟದಲ್ಲಿದ್ದಾಗ, ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದು ಎಂಬ ಸಣ್ಣ ಆಶಾಭಾವವೂ ಇಲ್ಲದಂತಾಗಿದ್ದಾಗ ನೀವು ಪಕ್ಷದ ನಾಯಕತ್ವ ವಹಿಸಿದಿರಿ. ಅತ್ಯಂತ ಸರಳ ವ್ಯಕ್ತಿತ್ವ, ಕುಶಾಗ್ರ ನಾಯಕತ್ವದಿಂದ ಭಾರತದ ರಾಜಕಾರಣಕ್ಕೆ ನೀವು ಘನತೆ ತಂದಿದ್ದೀರಿ.

ನೀವು ಓರ್ವ ಸಮರ್ಥ ನಾಯಕಿಯಾಗಿ ಪಕ್ಷದ ಸಂಘಟನೆಯ ಏಕೈಕ ಆಶಾಕಿರಣವಾದ ಕಾಂಗ್ರೆಸ್ ಪಕ್ಷವನ್ನು ಪ್ರಸ್ತುತಗೊಳಿಸಲು ಇದ್ದ ಕೊರತೆ ನೀಗಿಸಿದ್ದೀರಿ. ದುರಾದೃಷ್ಟವಶಾತ್ ನಾವು ಅಧಿಕಾದ ಕಳೆದುಕೊಂಡಿದ್ದೇವೆ, ಇದಕ್ಕೆ ನೀವಾಗಲೀ ಅಥವಾ ಗಾಂಧಿ ಕುಟುಂಬದ ಯಾರೂ ಸಹ ಕಾರಣರಲ್ಲ ಅಂತೆಲ್ಲಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿದ್ದು ಅಭಿಪ್ರಾಯ
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಹ ಈ ಬೆಳವಣಿಗೆಯ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ದೇಶದ ಹಿತದೃಷ್ಟಿಯಿಂದ ರಾಹುಲ್​ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ.  ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು ಎಂದಿದ್ದಾರೆ.

ದೇಶದ ಹಿತದೃಷ್ಟಿಯಿಂದ
ಅವರು ಕಾಂಗ್ರೆಸ್ ಪಕ್ಷದ
ಅಧ್ಯಕ್ಷಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ.

ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ.
1/2

— Siddaramaiah (@siddaramaiah)

ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ.
ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು.
2/2

— Siddaramaiah (@siddaramaiah)
click me!