ಮುಖ್ಯಮಂತ್ರಿ ಬಿಎಸ್ ವೈಗೆ ಡಿ.ಕೆ.ಶಿವಕುಮಾರ್ ಪತ್ರ

By Suvarna NewsFirst Published Aug 16, 2020, 9:52 AM IST
Highlights

kpcc ಅಧ್ಯಕ್ಷ ಡಿ.ಕೆ.ಶಿವಕಮಾರ್ ಮುಕ್ಯಮಂತ್ರಿ ಬಿಎಸ್ ಯಡಿಯೂರಪ್ಪಾವರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಭದ್ರತೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ಆ.16) :  ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ಘೋರ ದಾಳಿ ನಡೆದಿದ್ದರೂ ಈವರೆಗೂ ಶಾಸಕರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಸರ್ಕಾರ ರಕ್ಷಣೆ ನೀಡಿಲ್ಲ. ನಿರ್ಲಕ್ಷ್ಯ ಧೋರಣೆ ಬಿಟ್ಟು ಕೂಡಲೇ ಭದ್ರತೆ ಒದಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಅವರಿಗೆ ಪತ್ರ ಬೆರೆದಿರುವ ಅವರು, ಶಾಸಕರಿಗೆ ಪ್ರಾಣಹಾನಿ ಮಾಡಲು ಪ್ರಯತ್ನಿಸಿ ಶಾಸಕರ ಮನೆಗೆ ಹಾಗೂ ಅವರ ಸಂಬಧಿಕರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಂಪೂರ್ಣ ಧ್ವಂಸ ಮಾಡಿದ್ದಾರೆ. ಇದರಿಂದ ಶಾಸಕರ ಇಡೀ ಕುಟುಂಬ ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ.

ಉರಿವ ಬೆಂಕಿಗೆ ಬಿಜೆಪಿಯಿಂದ ತುಪ್ಪ: ಡಿಕೆಶಿ ಕಿಡಿ .

‘ಹೀಗಿದ್ದರೂ ಶಾಸಕರ ಭದ್ರತೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರ್ಕಾರ ಹಾಗೂ ಪೊಲೀಸ್‌ ಇಲಾಖೆಯ ನಿರ್ಲಕ್ಷ್ಯ ತೋರಿಸುತ್ತದೆ. ಒಬ್ಬ ಶಾಸಕರಿಗೆ ಸರ್ಕಾರ ಭದ್ರತೆ ಒದಗಿಸಲು ವಿಫಲವದರೆ ಇನ್ನು ಸಾಮಾನ್ಯ ಜನರನ್ನು ಈ ಸರ್ಕಾರ ರಕ್ಷಿಸಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು.

‘ಇಂತಹ ಘೋರ ಕೃತ್ಯ ನಡೆದರೂ ಸರ್ಕಾರದ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ನೆಪ ಮಾತ್ರಕ್ಕೆ ಭೇಟಿ ನೀಡಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ರಕ್ಷಣೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆಗೂ ಶಾಸಕರಿಗೆ ಹಾಗೂ ಅವರ ಕುಟುಂಬಕ್ಕೆ ಸರ್ಕಾರ ರಕ್ಷಣೆ ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಸಚಿವರು ಕೇವಲ ಅನಗತ್ಯ ಹೇಳಿಕೆಗಳನ್ನು ನೀಡುತ್ತಾ ಓಡಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.

click me!