ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ರಾಜಕಾರಣ: ಡಿ.ಕೆ.ಶಿವಕುಮಾರ್ ಹೇಳಿದ್ದಿಷ್ಟು

By Kannadaprabha News  |  First Published Jul 13, 2024, 9:47 AM IST

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಕೆಲ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವ ಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ. ಶಿವಕುಮಾರ್ 
 


ಬೆಂಗಳೂರು(ಜು.13):  ನಮ್ಮ ಪಕ್ಷದಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ, ಅದೆಲ್ಲವೂ ಸುಳ್ಳು, ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಹೀಗಾಗಿ ಹಿನ್ನಡೆ ಉಂಟಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ಇನ್ನು ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಕೆಲ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವ ಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ ಸಮರ್ಥಿಸಿಕೊಂಡಿದ್ದಾರೆ. 

Tap to resize

Latest Videos

ವಾಲ್ಮೀಕಿ ನಿಗಮದಲ್ಲಿ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

ಕೆಪಿಇಸಿ  ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾ‌ರ್, ಹೊಂದಾಣಿಕೆ ಎಂಬುದು ಸುಳ್ಳು, ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರೂ ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

click me!