ಮುಸ್ಲಿಮರ ಹೆಸರು ಕೇಳಿದರೆ ಬಿಜೆಪಿಯವ್ರಿಗೆ ಉರಿ, ಆರೆಸ್ಸೆಸ್ ನಿಜವಾದ ಭಯೋತ್ಪಾದಕರು: ಎಂ ಲಕ್ಷ್ಮಣ್ ಕಿಡಿ

By Suvarna NewsFirst Published Oct 16, 2024, 10:50 AM IST
Highlights

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ರದ್ದುಗೊಳಿಸಿದೆ. ಮುಸ್ಲಿಂ ಸಮುದಾಯದವರ ಹೆಸರು ಇರುವುದಕ್ಕೆ ಬಿಜೆಪಿಯವರು ಟೀಕಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿರುಗೇಟು ನೀಡಿದರು.

ಮೈಸೂರು (ಅ.16): ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ರದ್ದುಗೊಳಿಸಿದೆ. ಮುಸ್ಲಿಂ ಸಮುದಾಯದವರ ಹೆಸರು ಇರುವುದಕ್ಕೆ ಬಿಜೆಪಿಯವರು ಟೀಕಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿರುಗೇಟು ನೀಡಿದರು.

ಕಾಂಗ್ರೆಸ್ ಭವನದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಮುಸ್ಲಿಮರ ಹೆಸರು ಕೇಳಿದರೆ ಬಿಜೆಪಿಯರಿಗೆ ಉರಿ. ಮುಸ್ಲಿಮರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ಆದರೆ, ಬಿಜೆಪಿ ಹಾಗೂ ಆರ್ ಎಸ್ಎಸ್ ನವರು ನಿಜವಾದ ಭಯೋತ್ಪಾದಕರು. ರಾಜ್ಯ ಸರ್ಕಾರ 43 ಪ್ರಕರಣಗಳನ್ನು ಕೈ ಬಿಟ್ಟಿದೆ. ಅದರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಗೆ ಸಂಬಂಧಿಸಿದ 9 ಪ್ರಕರಣಗಳಿವೆ. ಉಳಿದ 34 ಪ್ರಕರಣಗಳು ಬಿಜೆಪಿ ಸರ್ಕಾರದ ಅವಧಿಗೆ ಸೇರಿವೆ. ರೈತ ಮುಖಂಡರು, ಕನ್ನಡಪರ ಹೋರಾಟಗಾರರಿಗೆ ಸಂಬಂಧಿಸಿದ ಪ್ರಕರಣಗಳಾಗಿವೆ. ಹುಬ್ಬಳ್ಳಿ ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇರುವುದರಿಂದ ಬಿಜೆಪಿಗರು ದೊಡ್ಡದು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು

Latest Videos

ಮುಡಾ ಭ್ರಷ್ಟಾಚಾರ ತಡೆಯಲು ಕೆಂಪಣ್ಣ ಆಯೋಗ ರಚನೆ; ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ಸುಳಿವು ನೀಡಿದ ಡಾ ಯತೀಂದ್ರ

ಸ್ನೇಹಮಯಿ ಕೃಷ್ಣ ವಿರುದ್ಧ ಕಿಡಿ:

 ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಬಿಜೆಪಿ ನಾಯಕರ ಅಣತಿಯಂತೆ ನೆಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು.

ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರ ನಡೆಸುವಂತೆ ಆಗ್ರಹಿಸಿದ್ದಾರೆ.  ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ನಾಯಕರ ಅಣತಿಯಂತೆ ನೆಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಮುಡಾ ಹಗರಣಕ್ಕೆ ಅಧ್ಯಕ್ಷ ಮರಿಗೌಡ ತಲೆದಂಡ: ಸರ್ಕಾರದಿಂದ ಶೀಘ್ರ ಆಡಳಿತಾಧಿಕಾರಿ ನೇಮಕ!

ಲಕ್ಷ್ಮಣ ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಹೋಗುತ್ತಿದ್ದಾರೆ. ಆದರೆ, ನಾನು ಒಮ್ಮೆ ಮಾತ್ರ ಹೋಗಿದ್ದೇನೆ. ಲೋಕಾಯುಕ್ತ ಕಚೇರಿ ಪಕ್ಕದಲ್ಲಿರುವ ಹೊಟೇಲ್ ನಲ್ಲಿ ಕಾಫಿ ಕುಡಿಯಲು ಪ್ರತಿನಿತ್ಯ ಹೋಗುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು. ಸ್ನೇಹಮಯಿ ಕೃಷ್ಣ ಬ್ಲಾಕ್ ಮೇಲರ್. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಪಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. 

click me!