ಡಿಕೆಶಿಯನ್ನು ಜೈಲಿಗೆ ಕಳುಹಿಸಲು ಕುಮಾರಸ್ವಾಮಿ ಸಂಚು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

By Kannadaprabha News  |  First Published Oct 11, 2023, 8:23 PM IST

ಒಕ್ಕಲಿಗ ಮುಖಂಡರ ಏಳಿಗೆ ಸಹಿಸದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಲು ಸಂಚು ರೂಪಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು. 


ಮೈಸೂರು (ಅ.11): ಒಕ್ಕಲಿಗ ಮುಖಂಡರ ಏಳಿಗೆ ಸಹಿಸದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಲು ಸಂಚು ರೂಪಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು. ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಬಹಳ ಹತಾಶರಾಗಿ ಒತ್ತಡಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಮೈತ್ರಿಯ ಮೊದಲ ಕಂಡಿಷನ್ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳಹಿಸಬೇಕು ಎಂಬುದಾಗಿದೆ ಎಂದು ದೂರಿದರು.

ಕುಮಾರಸ್ವಾಮಿ ಅವರಿಗೆ ತಾಕತ್ತು ಧಮ್ ಇದ್ದರೆ ಜೈಲಿಗೆ ಕಳುಹಿಸಬೇಕು. ಡಿ.ಕೆ. ಶಿವಕುಮಾರ್ ಜೀವ ತೆಗೆಯುವ ಸಂಚು ರೂಪಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಕೊಡುತ್ತೇನೆ. ಕುಮಾರಸ್ವಾಮಿ ಅವರಿಗೆ ತನ್ನ ಅಣ್ಣನ ಮಗನ ಬೆಳವಣಿಗೆ ಸಹಿಸಲಾಗದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ತಪ್ಪಿಸಿದರು. ಹಿಂದೆ ಚೆಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ ಬೆಳೆಯೋದು ಸಹಿಸಲಿಲ್ಲ. ಇದನ್ನು ಒಕ್ಕಲಿಗ ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. 19 ಶಾಸಕರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ- ಜೆಡಿಎಸ್ ಮೈತ್ರಿಗೆ ಒಪ್ಪಿಗೆ ಇದೆ ಎಂಬುದನ್ನು ಕುಮಾರಸ್ವಾಮಿ ಅವರು ಸಾಬೀತು ಪಡಿಸುವಂತೆ ಸವಾಲು ಹಾಕಿದರು. ರಾಜ್ಯಾಧ್ಯಕ್ಷರಿಗೆ ತಿಳಿಸಿದೇ ಮೈತ್ರಿ ಮಾಡಿಕೊಂಡಿದ್ದಾರೆ. 

Tap to resize

Latest Videos

ರಾಜ್ಯದ ಬಿಜೆಪಿ ಈಗ ಒಂದೇ ಮನೆ 15 ಬಾಗಿಲು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಸಿ.ಎಂ. ಇಬ್ರಾಹಿಂ ರಾಜೀನಾಮೆ ಸಲ್ಲಿಸಲು ಅ.16ರ ತನಕ ಯಾಕೇ ಕಾಯಬೇಕು ಎಂದು ಪ್ರಶ್ನಿಸಿದರು. ಶಾಸಕ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್ ಸರ್ಕಾರ ಸೂಸೈಡ್ ಭಾಗ್ಯ ಕೊಟ್ಟಿದೆ ಎಂದು ಆರೋಪಿಸಿದ್ದಾರೆ. ಜಿ.ಟಿ. ದೇವೇಗೌಡ ಅವರು ಹಿಟ್ ಅಂಡ್ ರನ್ ಹೇಳಿಕೆ ಕೊಡಬಾರದು. ನೂತನವಾಗಿ ಆಯ್ಕೆಯಾದ ಅಪ್ಪ- ಮಗ ತಮ್ಮ ಕ್ಷೇತ್ರಗಳಿಗೆ ಯಾವ ಯೋಜನೆ ತಂದಿದ್ದಾರೆ? ಮಾಡಿರುವ ಕೆಲಸದ ಬಗ್ಗೆ ಪಟ್ಟಿ ಬಿಡುಗಡೆ ಮಾಡಬೇಕು. ತಮ್ಮೊಂದಿಗೆ ಚರ್ಚೆಗಾದರೂ ಅವಕಾಶ ಕೊಡಬೇಕು ಎಂದು ಅವರು ಒತ್ತಾಯಿಸಿದರು.

click me!