ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಖಂಡ್ರೆ, ಬಿಎಸ್‌ವೈರನ್ನ ಭೇಟಿ ಮಾಡಿದ್ಯಾಕೆ..?
ಬೆಂಗಳೂರು, (ಫೆ.08): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಪ್ರಕರಣದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಇಂದು (ಶನಿವಾರ) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ ಈಶ್ವರ್ ಖಂಡ್ರೆ, ಶಾಹೀನ್ ಶಿಕ್ಷಣ ಸಂಸ್ಥೆ ಮೇಲಿನ ದೇಶದ್ರೋಹ ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಿದರು.
ಮಕ್ಕಳ ಮೇಲೆ ದೇಶದ್ರೋಹದ ಕೇಸ್ ಹಾಕಿದ್ದು ಖಂಡನೀಯ: ಖಂಡ್ರೆ
ಶಾಲೆ ಮುಖ್ಯ ಶಿಕ್ಷಕಿ ಹಾಗೂ ವಿದ್ಯಾರ್ಥಿನಿ ತಾಯಿ ವಿನಾಕಾರಣ ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಶಾಲೆಗೆ ಪೊಲೀಸರು ಬಂದು ವಿಚಾರಣೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಬಯಪಡುತ್ತಿದಾರೆ. ಅವರನ್ನ ಕೂಡಲೆ ಬಿಡುಗಡೆ ಮಾಡಬೇಕು ಎಂದು ಬೀದರ್ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಿಎಂಗೆ ವಿನಂತಿಸಿದರು.
ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆಗೆ ಬೀದರ್ ಶಾಸಕ ರಹಿಂ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ಸಾಥ್ ನೀಡಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ನಾಟಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಮಾಡಲಾಗಿತ್ತು. ಇದರು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡಿತ್ತು. ಅಷ್ಟೇ ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಶಿಕ್ಷಕನ್ನು ಅರೆಸ್ಟ್ ಮಾಡಬೇಕೆನ್ನುವ ಒತ್ತಾಯಗಳು ಸಹ ಕೇಳಿಬಂದಿದ್ದವು.
ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ದೇಶದ್ರೋಹದ ಕೇಸ್ ವಾಪಸ್ ಪಡೆಯಲು ಸಿದ್ದು ಆಗ್ರಹ
ಅದರಂತೆ ತನಿಖೆ ನಡೆಸಿದ್ದ ಪೊಲೀಸರು, ಆರೋಪದಡಿಯಲ್ಲಿ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆ ಮೇಲೆ ದೇಶದ್ರೋಹ ಕೇಸ್ ದಾಖಲಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.
ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ