
ಬೆಂಗಳೂರು, (ಏ.06): ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಪ್ರಚಾರದಲ್ಲಿ ತೊಡಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಂಡು ಬಂದಿರುವ ಕಾರಣ ಅವರು ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು, ವದರಿಯಲ್ಲಿ ಪಾಸಿಟಿವ್ ಬಂದಿದೆ.
ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸುರುವ ಅವರು, ಯಾರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ನಿಯಮಗಳ ಪ್ರಕಾರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ಶಾಕಿಂಗ್ ನ್ಯೂಸ್: ಕರ್ನಾಟಕದಲ್ಲಿ ಏ.6ರಂದು ಹೊಸ ದಾಖಲೆ ಬರೆದ ಕೊರೋನಾ 2ನೇ ಅಲೆ!
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಂಡು ಸುರಕ್ಷಿತವಾಗಿರಿ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಂದ ಆದಷ್ಟು ಬೇಗ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಬಸವಕಲ್ಯಾಣ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಈಶ್ವರ್ ಖಂಡ್ರೆ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ಆದ್ರೆ, ಇದೀಗ ಸೋಂಕು ತಗುಲಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಕೊಂಚ ಆತಂಕ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.