
ಬೆಂಗಳೂರು(ಅ.19): ದೇಶದ ಜೀವಾಳವಾದ ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದರು.
ಬಸವನಗುಡಿ ಕ್ಷೇತ್ರದಲ್ಲಿ ಭಾನುವಾರ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಅವರ ಪರವಾಗಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಾತ್ಯಾತೀತತೆ ಹಾಗೂ ವಿವಿಧತೆಯಲ್ಲಿ ಏಕತೆ ಗುಣದಿಂದ ಜಗತ್ತಿನಾದ್ಯಂತ ಗುರುತಿಸಿಕೊಂಡಿರುವ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದ ಕಟ್ಟಕಡೆಯ ಪ್ರಜೆಯೂ ನಿರ್ಭೀತಿಯಿಂದ ಬದುಕು ಸಾಗಿಸಬೇಕಾದರೆ ಇಂದಿನ ಕೆಟ್ಟಪರಿಸ್ಥಿತಿ ನಾವು ಹೊರಬರಬೇಕು. ವಿದ್ಯಾವಂತರು ಸಂಘಟಿತರಾಗಿ ದೇಶದ ಭವಿಷ್ಯದ ದೃಷ್ಟಿಯಿಂದ ಉತ್ತಮ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕೊರೋನಾ ಕಾಲದಲ್ಲಿ ಚುನಾವಣೆ ಬೇಕಿತ್ತಾ: ಬಸವರಾಜ ಹೊರಟ್ಟಿ ಆಕ್ರೋಶ
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ದೇಶ ಸಾರ್ವಭೌಮತ್ವ ಹಾಗೂ ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ವಿದ್ಯಾವಂತರು ದೇಶದ ಭವಿಷ್ಯದ ಬಗ್ಗೆ ಚಿಂತಿಸುವ ಅಗತ್ಯವಿದೆ. ಹೀಗಾಗಿ ಬರುವ ಚುನಾವಣೆಯಲ್ಲಿ ವಿದ್ಯಾವಂತರ ಸಂಘಟಿತರಾಗಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದರು. ಸಭೆಯಲ್ಲಿ ಬಸವನಗುಡಿ ಕ್ಷೇತ್ರದ ಮಾಜಿ ಶಾಸಕ ಕೆ.ಚಂದ್ರಶೇಖರ್, ಡಿಸಿಸಿ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.