ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಫೈನಲ್!

By Suvarna NewsFirst Published Mar 20, 2021, 3:28 PM IST
Highlights

ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿದೆ. ಶನಿವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಬೆಂಗಳೂರು, (ಮಾ.20): ಇದೇ ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಹುತೇಕ ಕಾಂಗ್ರೆಸ್​ ಅಭ್ಯರ್ಥಿ ಅಂತಿಮವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಈಗಾಗಲೇ ಮಸ್ಕಿ, ಬಸವಕಲ್ಯಾಣ ಹಾಗೂ ಸಿಂಧಗಿ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರುಗಳನ್ಜು ಘೋಷಣೆ ಮಾಡಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರುನ್ನು ಘೋಷಿಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಇಂದು (ಶನಿವಾರ) ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಅಭ್ಯರ್ಥಿಯನ್ನು ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಲ್ಲಿ ತೇಲಿಬಂದ ಅಚ್ಚರಿ ಹೆಸರುಗಳು!

ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್
ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಹುತೇಕ ಅಂತಿಮವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ‌ ಹೆಸರು ಹೈಕಮಾಂಡ್‌ಗೆ ಶಿಫಾರಸ್ಸು ಮಾಡಲು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಒಮ್ಮತದಿಂದ ಸತೀಶ್ ಜಾರಕಿಹೊಳಿ ಅವರ ಹೆಸರು ಅಂತಿಮಗೊಳಿಸಲಾಗಿದ್ದು, ಬಹುತೇಕ ಹೈಕಮಾಂಡ್ ಸೋಮವಾರ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ  ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿದ್ದು, ಏಪ್ರೀಲ್ 17 ರಂದು ಚುನಾವಣೆ ನಡೆಯಲಿದೆ. ಇನ್ನು ಬಿಜೆಪಿಯಲ್ಲಿ ಇನ್ನು ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಯಾಕಂದ್ರೆ ಐದಾರೂ ಜನ ಆಕಾಂಕ್ಷಿಗಳು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. 

click me!