'ಹೇಳಲೂ ಆಗುವುದಿಲ್ಲ, ಮಧ್ಯಂತರ ಚುನಾವಣೆ ಬಂದರೂ ಬರಬಹುದು'

By Suvarna NewsFirst Published Jul 19, 2021, 8:03 PM IST
Highlights

* ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರ
* ಪ್ರತಿಕ್ರಿಯಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 
* ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ ಎಂದು ಸತೀಶ್ ಜಾರಕಿಹೊಳಿ

ಬೆಳಗಾವಿ, (ಜು.19): ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಇಂದು (ಸೋಮವಾರ)  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಸಿಎಂ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ: ಕೈ ಎತ್ತಿದ ಬಿಜೆಪಿ ನಾಯಕ

ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ, ಸಿಎಂ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ಅದನ್ನು ಬಿಟ್ಟು ಬೇರೆ ಕೆಲಸ ಮಾಡಬೇಕಿದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು.

ರಾಜಕೀಯದಲ್ಲಿ ಹೀಗೇಯೇ ಎಂದು ಹೇಳಲೂ ಆಗುವುದಿಲ್ಲ. ಮಧ್ಯಂತರ ಚುನಾವಣೆ ಬಂದರೂ ಬರಬಹುದು. ಹೀಗಾಗಿ, ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಜಿಲ್ಲೆ ಸೇರಿ ಮುಂಬೈ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಾವು ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ತಾಪಂ, ಜಿಪಂ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜಕೀಯ ಎಂದ ಮೇಲೆ ಜಾತಿ ಲೆಕ್ಕಾಚಾರ ಇದ್ದೆ ಇರುತ್ತದೆ. ಆಯಾ ಜಾತಿ ಮುಖಂಡರು ಕಾಂಗ್ರೆಸ್ ನಲ್ಲಿ ಪಕ್ಷ‌ ಸಂಘಟನೆ ಮಾಡುವಲ್ಲಿ ನಿರತರಾಗಿದ್ದಾರೆ, ಅದು‌ ಸ್ವಾಭಾವಿಕ ಎಂದು ಸತೀಶ ಪ್ರತಿಕ್ರಿಯಿಸಿದರು.

click me!