ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ.
ಬೆಳಗಾವಿ, (ಡಿ.11): ಬಿಜೆಪಿಯ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಗಲೇ ಕಾಂಗ್ರೆಸ್ ಅಭ್ಯರ್ಥಿ ಹುಡುಕಾಟದಲ್ಲಿದೆ.
ಎಂ.ಪಿ.ಪಾಟೀಲ್ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ ಸಮಿತಿ ರಚಿಸಲಾಗಿದ್ದು, ಈ ಸಮಿಯ ಮೊದಲ ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಲವಾಗಿ ಕೇಳಿಬಂದಿದೆ. ಈ ಹಿನ್ನೆಯಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಬಹುತೇಕ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ.
'ಕೈ'ಗೆ ಬಲ: ಡಿಕೆಶಿ, ಜಾರಕಿಹೊಳಿ ಸಮ್ಮುಖದಲ್ಲಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ
ಆದ್ರೆ, ಇದನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನನ್ನ ಹೆಸರೇ ಅಂತಿಮವಾಗಿದೆ ಎಂದು ಸುದ್ದಿ ಹರಡಿದೆ. ಇದನ್ನು ಕೆಲವರು ಉದ್ದೇಶಪೂರ್ವಕವಾಗಿ ಮಾಡಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಅಭ್ಯರ್ಥಿ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಸಮಿತಿ ರಚಿಸಲಾಗಿದೆ. ಇನ್ನೊಮ್ಮೆ ಬೆಳಗಾವಿಯಲ್ಲಿ ಸಭೆ ನಡೆಯಲಿದೆ. ಅಲ್ಲಿ ಆಯ್ಕೆಯಾಗುವ ಅಭ್ಯರ್ಥಿಯೇ ಅಂತಿಮವಾಗುತ್ತದೆ ಎಂದು ಹೇಳಿದರು.