ಸಿಎಂ ರೇಸ್‌ನಲ್ಲಿ ಸಿದ್ದು- ಡಿಕೆಶಿ ಅಷ್ಟೇ ಅಲ್ಲ ಬಹಳ ಜನ ಇದ್ದಾರೆ: ಬಹಿರಂಗಪಡಿಸಿದ ಕಾಂಗ್ರೆಸ್ ನಾಯಕ

By Suvarna News  |  First Published Jan 7, 2021, 9:52 PM IST

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರವಾಗಿ ಕೆಪಿಸಿಸಿ ಕಾರ್ಯಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.


ಬಾಗಲಕೋಟೆ, (ಜ.07) : ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಇಂದು (ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರಸ್‌ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ರೇಸ್ ನಲ್ಲಿದ್ದಾರೆ ನಿಜ. ಅವರ ಹಿಂದೆ ಇನ್ನೂ ಬಹಳಷ್ಟು ಜನ ಕ್ಯೂನಲ್ಲಿದ್ದಾರೆ. ಅವರು ಆದ ಮೇಲೆ ನಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇವೆ ಎಂದರು.

Tap to resize

Latest Videos

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.

ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಚಾರವಲ್ಲ. ಯಾರೇ ಸಿಎಂ ಇದ್ದರೂ ನಮ್ಮ ಸಂಘಟನೆ-ಹೋರಾಟ ಮುಂದುವರೆಯುತ್ತದೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲು ಸಂಘಟನೆ ನಡೆಯುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.

click me!