ಸಂತೋಷ್ ಆತ್ಮಹತ್ಯೆ ಕೇಸ್, ಈಶ್ವರಪ್ಪಗೆ ಕ್ಲೀನ್ ಚಿಟ್, ಪೋಸ್ಟರ್ ವೈರಲ್

By Ramesh B  |  First Published Jul 20, 2022, 7:50 PM IST

ಗುತ್ತಿಗೆದಾರ ಸಂತೋ‍ಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರಿಂದ ಅವರ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿವೆ.


ಶಿವಮೊಗ್ಗ, (ಜುಲೈ.20): ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

 ಉಡುಪಿ ನಗರ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು ಈಶ್ವರಪ್ಪ ಮೇಲಿನ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ವರದಿಯನ್ನು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್‌ಗೆ ಸಲ್ಲಿಸಿದೆ. ಇದರಿಂದ ಮೊದಲ ಹಂತದಲ್ಲಿ ಈಶ್ವರಪ್ಪನವರಿಗೆ ಬಿಗ್ ರಿಲೀಸ್ ಸಿಕ್ಕಂತಾಗಿದೆ. 

Tap to resize

Latest Videos

ಪ್ರಕರಣದಲ್ಲಿ ಖುಲಾಸೆಯಾಗುತ್ತಿದ್ದಂತೆ ಮಾಜಿ ಸಚಿವ ಈಶ್ವರಪ್ಪ ಅವರ ಶಿವಮೊಗ್ಗ ನಿವಾಸದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.  ಬಿಜೆಪಿ ಕಾರ್ಯಕರ್ತರು ಹಾಗೂ ಈಶ್ವರಪ್ಪನವರ ಅಭಿಮಾನಿಗಳು ಸಂತಸಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಕ್ಕೆ ಸಂದ ಜಯ ಎನ್ನುವ ಪೋಸ್ಟರ್ ಹರಿಬಿಡುತ್ತಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪಗೆ ಬಿಗ್ ರಿಲೀಫ್

ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ "ಸತ್ಯಕ್ಕೆ ಸಂದ ಜಯ" ಟೈಟಲ್ ಪೋಸ್ಟರ್ ವೈರಲ್ ಆಗುತ್ತಿದೆ. ಪೋಸ್ಟರ್ ನಲ್ಲಿ ಈಶ್ವರಪ್ಪನವರ ಮನೆ ದೇವರು ಚೌಡೇಶ್ವರಿ ಅಮ್ಮನವರ ಮುಂದೆ ಹಸನ್ಮುಖರಾಗಿ ಹೈನು ನಿಂತಿರುವ ಭಾವಚಿತ್ರ ಹಾಗೇ ಹಿಂದುತ್ವದ ಕೇಸರಿ ಧ್ವಜ ಹಾರುತ್ತಿರುವ ಚಿತ್ರ ಇದೆ. ಈ ಪೋಸ್ಟರ್ ವೈರಲ್ ಆಗಿದೆ.

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ತಾವು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಲು 40 ಪರ್ಸೆಂಟ್‌ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ತಮ್ಮ ಸಾವಿಗೆ ಈಶ್ವರಪ್ಪ ಕಾರಣ ಎಂದು ವಾಟ್ಸ್‌ ಆಯಪ್‌ ಮೆಸೇಜ್‌ ಮಾಡಿ ಏ.12 ರಂದು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಬಳಿಕ ರಾಜಕೀಯ ಒತ್ತಡದ ಕಾರಣದಿಂದ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಉಡುಪಿ ಟೌನ್ ಪೊಲೀಸರು ಬಿ ರಿಪೋರ್ಟ್ ಹಾಕಿದ್ದು, ಈಶ್ವರಪ್ಪನವರ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ರದಿಯಲ್ಲಿ ಹೇಳಲಾಗಿದೆ. ವರದಿಯನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದು, ಈ ವರದಿಯನ್ನು ದೂರುದಾರರು ಚಾಲೆಂಜ್ ಮಾಡುವ ಅವಕಾಶಗಳು ಸಹ ಇವೆ.

click me!