ಕೊನೆಗೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಬಿಜೆಪಿ ಸರ್ಕಾರದ 2ನೇ ವಿಕೆಟ್ ಪತನ

Published : Apr 14, 2022, 06:29 PM ISTUpdated : Apr 14, 2022, 07:28 PM IST
ಕೊನೆಗೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಬಿಜೆಪಿ ಸರ್ಕಾರದ 2ನೇ ವಿಕೆಟ್ ಪತನ

ಸಾರಾಂಶ

* ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ * ಕೊನೆಗೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ * ಬೊಮ್ಮಾಯಿ ಸಂಪುಟದ 2ನೇ ವಿಕೆಟ್ ಪತನ    

ಶಿವಮೊಗಗ್ಗ, (ಏ.14): ಗುತ್ತೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಇಂದು(ಗುರುವಾರ) ಸಂಜೆ ಶಿವಮೊಗ್ಗದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಸ್ಥಾನಕ್ಕೆ  ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈಗಾಗಲೇ ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

40% ಕಮಿಷನ್‌ ಆತ್ಮಹತ್ಯೆ ಸುತ್ತ ಅನುಮಾನಗಳ ಹುತ್ತ: ಸಂತೋಷ್ ಪಾಟೀಲ್‌ ಸಾವಿನ ನಂತರ 12 ಪ್ರಶ್ನೆ

ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸೋದಾಗಿ ಘೋಷಿಸಿದರು. 

ನಾಳೆ(ಶುಕ್ರವಾರ) ಸಿಎಂಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ. ಈ ಕುರಿತು ನಾನು ಸಿಎಂ ಜೊತೆಗೂ ಚರ್ಚೆ ಮಾಡಿದ್ದೇನೆ. ಸಿಎಂ ಹಾಗೂ ಎಲ್ಲ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ. ರಾಜೀನಾಮೆ ನೀಡುವ ಬಗ್ಗೆ 3-4 ದಿನದ ಹಿಂದೆ ನಿರ್ಧರಿಸಿದ್ದೆ ಎಂದು ಹೇಳಿದರು.

ನಿನ್ನೆ(ಬುಧವಾರ) ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದರು. ಬೆಳಗ್ಗೆಯಿಂದ ಈಶ್ವರಪ್ಪ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 3 ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲವೆಂದಿದ್ದರು. ಇಂದು(ಗುರುವಾರ) ಸುದ್ದಿಗೋಷ್ಠಿ ಕರೆದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ
ಸಂತೋಷ್ ಪಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಸಂತೋಷ್ ಅವರ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದು, ಈ ದೂರಿನಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಅವರೇ ಮೊದಲ ಆರೋಪಿ ಆಗಿದ್ದಾರೆ. ಈಶ್ವರಪ್ಪ ಅವರ ಆಪ್ತ ಸಹಾಯಕರ ಹೆಸರನ್ನೂ ದೂರಿನಲ್ಲಿ ನಮೂದಿಸಲಾಗಿದೆ. ಐಪಿಸಿ ಸೆಕ್ಷನ್ 306 ಅಡಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಡಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆರ್‌ನಲ್ಲೂ ಮೊದಲ ಆರೋಪಿ ಎಂದೇ ನಮೂದಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಹಿಂಡಲಗ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ. ಸಂತೋಷ್ ಪಾಟೀಲ್ ಗುತ್ತಿಗೆ ಕಾಮಗಾರಿಯೊಂದರಲ್ಲಿ ಸಚಿವ ಈಶ್ವರಪ್ಪ ವಿರುದ್ಧ 40% ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೆಲ ತಿಂಗಳ ಹಿಂದೆ ಸುದ್ದಿಯಾಗಿದ್ದರು. ಅವರ ಆರೋಪವನ್ನು ತಳ್ಳಿಹಾಕಿದ್ದ ಹಿರಿಯ ಸಚಿವ ಈಶ್ವರಪ್ಪ ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗಲೇ ಸಂತೋಷ್ ಪಾಟೀಲ್ ನಿನ್ನೆ ಏಪ್ರಿಲ್ 12ರಂದು ಉಡುಪಿಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. 

ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬ ಸಂದೇಶವನ್ನು ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ (Whatsapp) ಮಾಡಿದ್ದರು. ಹೀಗಾಗಿ ಸಚಿವರಾದ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಎಫ್ ಐ ಆರ್ (FIR) ದಾಖಲಿಸಬೇಕು ಎಂದು ಕಾಂಗ್ರೆಸ್ (Congress) ಆಗ್ರಹಿಸಿತ್ತು. ಇದಾದ ಮೇಲೆ ನಿನ್ನೆ ಮಧ್ಯಾಹ್ನ ನಂತರ ನಡೆದ ಬೆಳವಣಿಗೆಯಲ್ಲಿ ಸಂತೋಷ್ ಆತ್ಮಹತ್ಯೆ ಸಂಬಂಧ  ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮೊದಲ ಆರೋಪಿ ಸ್ಥಾನದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಇದೆ.

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ