ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸೊಸೆಗೆ ಬಿಜೆಪಿ ಟಿಕೆಟ್ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ನಾಯಕರ ಸೂಚನೆಗೆ ಈಶ್ವರಪ್ಪ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು (ಏ.18): ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸೊಸೆಗೆ ಬಿಜೆಪಿ ಟಿಕೆಟ್ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ನಾಯಕರ ಸೂಚನೆಗೆ ಈಶ್ವರಪ್ಪ ಕಾಯುತ್ತಿದ್ದಾರೆ ಎನ್ನಲಾಗಿದೆ. ಮಗ ಕಾಂತೇಶ್ ಗೆ ಈಶ್ವರಪ್ಪ ಟಿಕೆಟ್ ಬಯಸಿದ್ದರು. ಕಾಂತೇಶ್ ಗೆ ಟಿಕೆಟ್ ಕೊಡದಿದ್ದರೆ ಸೊಸೆ ಶಾಲಿನಿ ಕಾಂತೇಶ್ ಗೆ ಟಿಕೆಟ್ ಕೊಡಿಸಲು ಈಶ್ವರಪ್ಪ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಲಿದೆ ಎನ್ನುವ ಸೂಚನೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದರು. ನಾನು ಸ್ವಇಚ್ಚೆಯಿಂದಲೇ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂದು ಹೇಳಿ ಕಾರ್ಯಕರ್ತರನ್ನು ಸಮಾಧಾನ ಪಡಸಿದ್ದರು. ಆಗಲೇ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಬಗ್ಗೆ ಪ್ಲಾನ್ ನಡೆದಿತ್ತು. ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡುವ ವಿಚಾರ ನನಗೆ ತಿಳಿದಿಲ್ಲ. ಪುತ್ರನಿಗೆ ಟಿಕೆಟ್ ಕೊಡುವ ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಈಶ್ವರಪ್ಪ ಹೇಳಿದ್ದರು. ಅಂದೇ ಈಶ್ವರಪ್ಪ ನಿವಾಸದಲ್ಲಿ ಬೆಂಬಲಿಗರು ಪುತ್ರನನ್ನು ಹೆಗಲ ಮೇಲೆ ಕೂರಿಸಿಕೊಂಡು ಜೈಕಾರ ಹಾಕಿದ್ದರು. ಇದೀಗ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಸೊಸೆಗೆ ಟಿಕೆಟ್ ಕೊಡಿಸುವ ಯೋಜನೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ನೀಡುವಂತೆ ಖರ್ಗೆ ಮುಂದೆ ಸಿದ್ದರಾಮಯ್ಯ ಬಿಗಿ ಪಟ್ಟು
ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಬಿಟ್ಟು ಬರುವವರಲ್ಲಿ ಯಡಿಯೂರಪ್ಪ ಒಬ್ರು ಬಾಕಿ: ಪ್ರಿಯಾಂಕ್ ಖರ್ಗೆ