
ಬಂಟ್ವಾಳ [ನ.09]: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಖಾತೆ ಬದಲಾವಣೆ ಇಚ್ಛೆ ವ್ಯಕ್ತಪಡಿಸಿದ್ದು, ನನಗೆ ದೇವರ ಬಗ್ಗೆ ಹೆಚ್ಚಿನ ಒಲವಿದ್ದು ಮುಜರಾಯಿ ಖಾತೆ ಕೊಟ್ಟಿದ್ದರೆ ಚೆನ್ನಾಗಿತ್ತು ಎಂದಿದ್ದಾರೆ.
ಬಂಟ್ವಾಳದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿದ ಅವರು, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಪ್ರೀತಿ, ಕಾಳಜಿ ಇದೆ. ನನಗೆ ದೇವರ ಬಗ್ಗೆ ಹೆಚ್ಚಿನ ಒಲವು. ಹಾಗಾಗಿ ನನಗೆ ಮುಜರಾಯಿ ಖಾತೆ ನೀಡಿ, ಕೋಟ ಅವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಜವಾಬ್ದಾರಿ ಕೊಟ್ಟು ಖಾತೆ ಅದಲು ಬದಲು ಮಾಡಿದರೆ ಚೆನ್ನಾಗಿತ್ತು ಎಂದು ಹೇಳಿದ್ದಾರೆ.
ಸಿಎಂ ಆಗಲು ಸಿದ್ದು ತಿರುಕನ ಕನಸು: ಸಚಿವ ಈಶ್ವರಪ್ಪ ಲೇವಡಿ...
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇರುವ ಜ್ಞಾನ ಅದಕ್ಕೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗಿಲ್ಲ. ಪಂಚಾಯತ್ ರಾಜ್ ಅಭಿವೃದ್ಧಿಗೆ ನಿಮ್ಮ ಸಲಹೆ ಅಗತ್ಯವಿದ್ದು, ಮುಜರಾಯಿ ಇಲಾಖೆಯಲ್ಲಿನ ವ್ಯವಸ್ಥೆ ಸುಧಾರಣೆಗೆ ನನ್ನ ಸಲಹೆಯನ್ನು ಸ್ವೀಕರಿಸಬೇಕು ಎಂದು ಈಶ್ವರಪ್ಪ ಹಾಸ್ಯಭರಿತವಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.