ಕೆ.ಎಸ್.ಡಿ.ಎಲ್ ಸಂಸ್ಥೆಯಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಹಸ್ತಾಂತರ; ಮೈಸೂರು ಸ್ಯಾಂಡಲ್ ಸೋಪ್ ಭರ್ಜರಿ ಸೇಲ್

Published : Oct 24, 2025, 01:24 PM IST
KSDL Dividend

ಸಾರಾಂಶ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭಾಂಶವಾಗಿ 135 ಕೋಟಿ ರೂಪಾಯಿಗಳನ್ನು ಸರಕಾರಕ್ಕೆ ಹಸ್ತಾಂತರಿಸಿದೆ. ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂ. ವಹಿವಾಟು ನಡೆಸಿ 451 ಕೋಟಿ ರೂ. ಲಾಭ ಗಳಿಸಿದ್ದು, ಇದು ಸಂಸ್ಥೆಯ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆಯಾಗಿದೆ.

ಬೆಂಗಳೂರು (ಅ.23): ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಚಿವ ಪಾಟೀಲರು ಮಾತನಾಡಿ, ಕೆಎಸ್ಡಿಎಲ್ (Karnataka Soaps and Detergents Limited (KSDL) ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

ಕಳೆದ ವರ್ಷದ ₹108 ಕೋಟಿ ಲಾಭಾಂಶ ಹಸ್ತಾಂತರ:

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ