ಕೂಡ್ಲಿಗಿ: ಬಿಜೆಪಿ ಶಾಸಕ ಗೋಪಾಲಕೃಷ್ಣ ರಾಜೀನಾಮೆ ಸಲ್ಲಿಕೆ, ಕಾಂಗ್ರೆಸ್ ತೆಕ್ಕೆಗೆ ಬಿದ್ದ ಕಮಲ ನಾಯಕ..!

Published : Mar 31, 2023, 12:50 PM ISTUpdated : Mar 31, 2023, 12:55 PM IST
ಕೂಡ್ಲಿಗಿ: ಬಿಜೆಪಿ ಶಾಸಕ ಗೋಪಾಲಕೃಷ್ಣ ರಾಜೀನಾಮೆ ಸಲ್ಲಿಕೆ, ಕಾಂಗ್ರೆಸ್ ತೆಕ್ಕೆಗೆ ಬಿದ್ದ ಕಮಲ ನಾಯಕ..!

ಸಾರಾಂಶ

ಸ್ಪೀಕರ್ ವಿಶ್ವೆಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಗೋಪಾಲಕೃಷ್ಣ

ವಿಜಯನಗರ(ಮಾ.31): ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅಧಿಕೃತವಾಗಿ ಇಂದು(ಶುಕ್ರವಾರ) ರಾಜೀನಾಮೆ ಸಲ್ಲಿಸಿದ್ದಾರೆ. ಹೌದು,  ಗೋಪಾಲಕೃಷ್ಣ ಅವರು ಸ್ಪೀಕರ್ ವಿಶ್ವೆಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.  ಈ ಮೂಲಕ ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್ ತೆಕ್ಕೆಗೆ ಬಿದ್ದಂತಾಗಿದೆ. 

ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. 70 ವರ್ಷ ದಾಟಿದವರಿಗೆ ಟಿಕೆಟ್ ಇಲ್ಲ ಎಂದಿರೋ‌ ಪರಿಣಾಮ ಬಿಜೆಪಿ ವಿಕೆಟ್ ಪತನವಾಗಿದೆ. 

ಮತ್ತೊಬ್ಬ ಬಿಜೆಪಿ ಹಿರಿಯ ನಾಯಕ ಕಾಂಗ್ರೆಸ್‌ಗೆ?

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್