
ಕಲಬುರಗಿ(ಜೂ.12): ಕಾಂಗ್ರೆಸ್ ಸರ್ಕಾರ 45 ಪರ್ಸೆಂಟ್ ಎಂದು ಆರೋಪಿಸುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಗೆ ತಕ್ಕ ದಾಖಲೆ ಕೊಡಲಿ ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ನಾವು ಸುಮ್ಮನೆ ಕಾಮಗಾರಿ ನಿಲ್ಲಿಸಿಲ್ಲ. ಚುನಾವಣೆಗೂ ಮುನ್ನ ತರಾತುರಿಯಲ್ಲಿ ಟೆಂಡರ್ ಆಗಿದೆ. ಗುತ್ತಿಗೆದಾರರನ್ನು ಕರೆಸಿ ಮಾತನಾಡಲಾಗಿದೆ. ನನ್ನದೇ ಇಲಾಖೆಯಲ್ಲಿ ಎಲ್1 ಬಿಟ್ಟು, ಎಲ್2, ಎಲ್ 3ಗೆ ಗುತ್ತಿಗೆ ಕೊಟ್ಟಿದ್ದಾರೆ. ಇದಕ್ಕಾಗಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಸಸ್ಪೆಂಡ್ ಮಾಡಿದ್ದೇವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ‘ನಮ್ಮ ಕ್ರಮ ಟೀಕಿಸುವ ಜನತಾದಳದವರಿಗೆ ಪಾರದರ್ಶಕತೆ ಬೇಡವೇ? ಭ್ರಷ್ಟಾಚಾರದ ವಿರುದ್ಧ ನಾವು ಕ್ರಮ ಕೈಗೊಳ್ಳೋದು ಬೇಡಬೇ? 45 ಪರ್ಸೆಂಟ್ ಅಂತ ಯಾವ ಆಧಾರದ ಮೇಲೆ ಹೇಳ್ತಾರೆ? ಏನಾದ್ರೂ ದಾಖಲೆ ಇದ್ದರೆ ಕೊಡಿ, ಅದನ್ನೂ ತನಿಖೆ ಮಾಡ್ತೇವೆ’ ಎಂದರು.
ಭ್ರಷ್ಟ ಪಿಡಿಒಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಸರ್ಕಾರ ಅಧಿಕಾರಕ್ಕೆ ಬಂದು ಒಂದೇ ತಿಂಗಳಾಗಿದೆ. ಈ ವ್ಯವಸ್ಥೆ ಬದಲಾವಣೆ ಮಾಡಲು ಎಲ್ಲರೂ ಸಹಕಾರ ನೀಡಬೇಕು. ಅದೆನ್ನೆಲ್ಲ ಬಿಟ್ಟು ಶೇ 45, ಶೇ.50 ಸರ್ಕಾರ ಅಂತ ಹೇಳಿ ಗೂಬೆ ಕೂರಿಸುವುದನ್ನು ಬಿಡಬೇಕು ಎಂದÜ ಪ್ರಿಯಾಂಕ್ ಖರ್ಗೆ, ಕರ್ನಾಟಕದಲ್ಲಿ ಕನ್ನಡಿಗರಿಗೆ ಒಳ್ಳೆಯ ಆಡಳಿತ ನೀಡಲು ಸಹಕರಿಸಿ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.