ರಾಜ್ಯ ಚುನಾವಣೆಯಲ್ಲಿ ಬಿಜೆಪಿ ವತಿಯಿಂದ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರು (ಏ.13): ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ನಿರಂತರ ಬೊಬ್ಬಿರಿಯುವ ಅಮಿತ್ ಶಾ ಮತ್ತು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹೇಳುವುದು ಒಂದು, ಮಾಡುವುದು ಒಂದು. ರಾಜ್ಯ ಚುನಾವಣೆಯಲ್ಲಿ ಬಿಜೆಪಿ ವತಿಯಿಂದ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕುಟುಂಬ ರಾಜಕಾರಣದ ಕೂಸು, ಅವರ ತಂದೆ ಮಾಜಿ ಸಿಎಂ ಆಗಿದ್ದವರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನ್ನ ಪುತ್ರನಿಗೆ ಶಾಸಕ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದು, ಅವರ ಮತ್ತೊಬ್ಬ ಪುತ್ರ ಸಂಸದರಾಗಿದ್ದಾರೆ.
ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದ್ದು, ಅವರ ಸೋದರನ ಮಗ ತೇಜಸ್ವಿ ಸೂರ್ಯ ಸಂಸದರಾಗಿದ್ದಾರೆ.
ಶಾಸಕ ಜ್ಯೋತಿ ಗಣೇಶ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ, ಅವರ ತಂದೆ ಬಸವರಾಜ್ ಸಂಸದರಾಗಿದ್ದಾರೆ.
ಇಬ್ಬರು ಜಾರಕಿಹೊಳಿ ಸಹೋದರರಿಗೆ ಮತ್ತೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
ಕತ್ತಿ ಕುಟುಂಬದಲ್ಲಿ, ಉಮೇಶ್ ಕತ್ತಿ ಅವರ ಮಗ ಹಾಗೂ ಸಹೋದರನಿಗೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
ಇಬ್ಬರು ರೆಡ್ಡಿ ಸಹೋದರರಿಗೆ ಎಂಎಲ್ಎ ಟಿಕೆಟ್ ನೀಡಲಾಗಿದೆ.
ಹರ್ಷವರ್ಧನ್‌ಗೆ ಎಂಎಲ್‌ಎ ಟಿಕೆಟ್ ನೀಡಲಾಗಿದ್ದು, ಅವರ ಮಾವ ಶ್ರೀನಿವಾಸ್ ಪ್ರಸಾದ್ ಸಂಸದರಾಗಿದ್ದಾರೆ.
ಬಿಜೆಪಿ ಸಂಸದ ಅಣ್ಣಾಸಾಹೇಬರ ಪತ್ನಿ ಶಶಿಕಲಾ ಜೊಲ್ಲೆಗೆ ಟಿಕೆಟ್ ನೀಡಲಾಗಿದೆ.
ಮಾಜಿ ಸಚಿವರ ಪುತ್ರ ಪ್ರೀತಂ ನಾಗಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಸಂಸದ ಉಮೇಶ್ ಜಾಧವ್ ಮಗ ಅವಿನಾಶ್ ಜಾಧವ್‌ಗೆ ಟಿಕೆಟ್ ನೀಡಲಾಗಿದೆ.
ಮಾಜಿ ಸಿಎಂ ಮಗ ಕುಮಾರ್ ಬಂಗಾರಪ್ಪ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಮಾಜಿ ಸಚಿವರ ಮಗ ದತ್ತಾತ್ರೇಯ ಪಾಟೀಲ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಸುರೇಶ್ ಬಾಬು ಮತ್ತು ಶ್ರೀರಾಮುಲು, ಅವರ ಸೋದರಳಿಯ ಮತ್ತು ಚಿಕ್ಕಪ್ಪನಿಗೆ ಟಿಕೆಟ್ ನೀಡಲಾಗಿದೆ.
ಮಾಜಿ ಶಾಸಕನ ಪುತ್ರ ಅರವಿಂದ್ ಬೆಲ್ಲದ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಚಂದ್ರಕಾಂತ ಪಾಟೀಲ್‌ಗೆ ಟಿಕೆಟ್ ನೀಡಲಾಗಿದ್ದು, ಅವರ ತಂದೆ ವಿಧಾನ ಪರಿಷತ್ ಸದಸ್ಯ ಆಗಿದ್ದಾರೆ.
ಮಾಜಿ ಸಚಿವರ ಮಗ ಸಪ್ತಗಿರಿ ಗೌಡರಿಗೆ ಟಿಕೆಟ್.
ಮಾಜಿ ಶಾಸಕರ ಪುತ್ರ ಅಮೃತ್ ದೇಸಾಯಿಗೆ ಮತ್ತೆ ಟಿಕೆಟ್.
ಸಚಿವ ಆನಂದ್ ಸಿಂಗ್ ಅವರ ಮಗ ಸಿದ್ದಾರ್ಥ್ ಸಿಂಗ್‌ಗೆ ಟಿಕೆಟ್.
ಮಾಜಿ ಸಚಿವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.