ಶಕ್ತಿಕೇಂದ್ರವಾದ ಡಿಕೆಶಿ ನಿವಾಸ: ನನಗ್ಯಾರು ಆಫರ್ ಮಾಡಿಲ್ಲ ಎಂದ ಕುಮಾರಸ್ವಾಮಿ

Published : May 13, 2023, 07:56 AM IST
 ಶಕ್ತಿಕೇಂದ್ರವಾದ ಡಿಕೆಶಿ ನಿವಾಸ: ನನಗ್ಯಾರು ಆಫರ್ ಮಾಡಿಲ್ಲ ಎಂದ ಕುಮಾರಸ್ವಾಮಿ

ಸಾರಾಂಶ

ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಶಕ್ತಿಕೇಂದ್ರವಾಗಿ ಹೊರ ಹೊಮ್ಮುವ ಎಲ್ಲಾ ಲಕ್ಷಣಗಳು ಕಾಣಿಸ್ತಾ ಇದೆ.

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಶಕ್ತಿಕೇಂದ್ರವಾಗಿ ಹೊರ ಹೊಮ್ಮುವ ಎಲ್ಲಾ ಲಕ್ಷಣಗಳು ಕಾಣಿಸ್ತಾ ಇದೆ.  ಸದಾಶಿವನಗರದ ನಿವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ  ನಿನ್ನೆ ತಡರಾತ್ರಿಯವರೆಗೂ ಜಿಲ್ಲಾ ನಾಯಕರ ಜೊತೆಗೆ ಚರ್ಚೆ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಡಿಕೆಶಿ ಗೆ ಸಿಗುತ್ತಾ ಪಟ್ಟ ಎಂಬ ಬಗ್ಗೆ ಕುತೂಹಲ ಮೂಡಿದೆ.

ಇತ್ತ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು,  ಡಿಕೆಶಿ ಸಾರಥ್ಯದಲ್ಲಿ ಕಾಂಗ್ರೆಸ್  ಚುನಾವಣಾ ಸಂಘಟನೆ ನಡೆಸಿತ್ತು.  ಹೀಗಾಗಿ ಪಕ್ಷ ಅಧಿಕಾರಕ್ಕೆ ಬಂದರೆ ಡಿಕೆಶಿ ಗೆ ಸಿಗುತ್ತಾ ಪಟ್ಟ ಎಂಬುದು ಸೇರಿದಂತೆ ಹತ್ತು ಹಲವು ಕುತೂಹಲಗಳಿಗೆ ಇಂದೇ ಉತ್ತರ ಸಿಗಲಿದೆ. ಈ ಮಧ್ಯೆ ಚುನಾವಣೆ ಬಳಿಕವಿಶ್ರಾಂತಿ ಹಾಗೂ ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದ ಕುಮಾರಸ್ವಾಮಿ ಮರಳಿ ಬೆಂಗಳೂರಿಗೆ ಬಂದಿದ್ದಾರೆ.  ಏರ್‌ಪೋರ್ಟ್‌ನಲ್ಲಿ ಈ ವೇಲೆ ಮಾಧ್ಯಮ ಪ್ರತಿನಿಧಿಗಳು ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬೇರೆ ಪಕ್ಷದ ಜೊತೆ ಮೈತ್ರಿ ಬಗ್ಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ತನ್ನನ್ನು ಇದುವರೆಗೆ ಯಾರೂ  ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಸಮೀಕ್ಷೆಗಳ ಪ್ರಕಾರ, ಬಿಜೆಪಿ ಅಥವಾ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಬಂದಿದೆ. ಹೀಗಿರುವಾಗ ನನ್ನ ಯಾರು ಸಂಪರ್ಕಿಸುತ್ತಾರೆ. ನನ್ನನ್ನು ಯಾರೂ ಸಂಪರ್ಕಿಸಿಲ್ಲ, ಕಾಂಗ್ರೆಸ್ ನಾಯಕರು ಈಗಾಗಲೇ ಗದ್ದುಗೆಗೆ ಏರಲು ಸೂಟು ಬೂಟು ಹೊಲಿಸಿ ಸಿದ್ಧವಾಗಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಾನು ಯಾರಿಗೂ ಆಫರ್ ನೀಡಿಲ್ಲ, ನನಗೂ ಯಾರು ಆಫರ್ ಮಾಡಿಲ್ಲ,, ಇನ್ನೆರಡು ಗಂಟೆ ಕಾಯಿರಿ ನಿಮಗೆ ಎಲ್ಲವೂ  ತಿಳಿಯಲಿದೆ ಎಂದು ಹೇಳಿ ಹೊರಟು ಹೋದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!