ಕುಮಾರಸ್ವಾಮಿ ಸಿಎಂ ಆಗುವ ಆಸೆ ಈಡೇರೋದಿಲ್ಲ; ಸಚಿವ ಸಿ.ಸಿ.ಪಾಟೀಲ್

Published : Feb 13, 2023, 11:18 AM IST
ಕುಮಾರಸ್ವಾಮಿ ಸಿಎಂ ಆಗುವ ಆಸೆ ಈಡೇರೋದಿಲ್ಲ; ಸಚಿವ ಸಿ.ಸಿ.ಪಾಟೀಲ್

ಸಾರಾಂಶ

ಲಿಂಗಾಯತ ಮತ ಬ್ಯಾಂಕ್‌ನ್ನು ವಿಚಲಿತಗೊಳಿಸುವ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ಸಿಎಂ ಗಾಳ ಉರಳಿಸಿದ್ದಾರೆ ಅಷ್ಟೇ, ಅವರ ಆಸೆ ಈಡೇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಗದಗ (ಫೆ.13) : ಲಿಂಗಾಯತ ಮತ ಬ್ಯಾಂಕ್‌ನ್ನು ವಿಚಲಿತಗೊಳಿಸುವ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ಸಿಎಂ ಗಾಳ ಉರಳಿಸಿದ್ದಾರೆ ಅಷ್ಟೇ, ಅವರ ಆಸೆ ಈಡೇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರ ಲಿಂಗಾಯತ ಮತ ಬ್ಯಾಂಕ್‌(Lingayat vote bank) ಯಾವತ್ತಿಗೂ ಇದೆ. ಕುಮಾರಸ್ವಾಮಿ(HD Kumaraswamy) ಅವರ ಮಾತಿಗೆ ಮತದಾರರು ತಲೆಕೆಡಿಸಿಕೊಳ್ಳಬಾರದು. ಮುಂದಿನ ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಎಂಬುದು ಸ್ಪಷ್ಟವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit shah) ಅವರೇ ಪರೋಕ್ಷವಾಗಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆ ವಿರೋಧ ಪಕ್ಷದವರು ಮಾಡುತ್ತಿರುವ ಕುತಂತ್ರ ಅಷ್ಟೇ. ಅದನ್ನು ನಮ್ಮ ಪಕ್ಷದ ಹಿರಿಯರು ಸ್ಪಷ್ಟಮಾಡಿದ್ದು, ಇದರ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ದೇವತೆಗಳನ್ನು ಪೂಜಿಸುವ ಅರ್ಚಕರು ಮಹಾನ್‌ ಶಕ್ತಿವಂತರು: ಸಚಿವ ಬಿ.ಸಿ.ಪಾಟೀಲ

ಶೃಂಗೇರಿ ಮಠಕ್ಕೆ ಟಿಪ್ಪುವಿನ ಕೊಡುಗೆ ಏನೆಂಬುದು ಎಲ್ಲರಿಗೂ ತಿಳಿದಿದೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿ.ಸಿ. ಪಾಟೀಲ ತೀಕ್ಷ$್ಣವಾಗಿ ಪ್ರತಿಕ್ರಿಯಿಸಿ, ಚುನಾವಣೆ ಸಂದರ್ಭದಲ್ಲಿ ಶೃಂಗೇರಿ ಮಠದ ಬಗ್ಗೆ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಇಷ್ಟೇಕೆ ಪ್ರೀತಿ ಎಂದು ಮರು ಪ್ರಶ್ನಿಸಿದರು. ಲಿಂಗಾಯತರಿಗೆ, ಯಡಿಯೂರಪ್ಪ ಅವರಿಗೆ ಅನ್ಯಾಯ ಮಾಡಿದ ಪಕ್ಷ ಯಾವುದು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ ಎಂದರು.

ಈ ವೇಳೆ ಗದಗ- ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹಾಜರಿದ್ದರು.

ಲಕ್ಕುಂಡಿ ಉತ್ಸವ ಯಶಸ್ವಿ:

ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಲಕ್ಕುಂಡಿ ಉತ್ಸವ(Lakkundi Utsav)ವನ್ನು ಅರ್ಥಪೂರ್ಣ, ಅದ್ಧೂರಿಯಾಗಿ ಆಚರಿಸಲಾಗಿದ್ದು ಜನರಿಂದ ಉತ್ಸವಕ್ಕೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ(CC Patil) ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದರಿಂದ ಮತ್ತಷ್ಟುಉತ್ಸಾಹ ಮೂಡಿದೆ. ಜಿಲ್ಲಾಡಳಿತ ಹಾಗೂ ಲಕ್ಕುಂಡಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ತುಂಬ ಹೃದಯದ ಧನ್ಯವಾದಗಳು. ಈ ಉತ್ಸವದಲ್ಲಿ ನನ್ನ ಪಾತ್ರ ನಿಮಿತ್ತ ಮಾತ್ರ. ಎಲ್ಲರ ಸಹಕಾರದಿಂದ ಈ ಉತ್ಸವ ಯಶಸ್ವಿಯಾಗಿದೆ ಎಂದರು.

ಲಕ್ಕುಂಡಿ ಉತ್ಸವ-2023: ಸಚಿವ ಸಿ.ಸಿ.ಪಾಟೀಲರಿಂದ ಲೋಗೋ, ಪ್ರೋಮೊ ಬಿಡುಗಡೆ

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಸ್ತೆ ಅಭಿವೃದ್ಧಿಗಾಗಿ .2 ಲಕ್ಷ ಕೋಟಿಗೂ ಅಧಿಕ ಅನುದಾನ ನೀಡಿದೆ. ಅದಕ್ಕಾಗಿ ಧನ್ಯವಾದ ತಿಳಿಸುತ್ತೇನೆ.

ಸಿ.ಸಿ. ಪಾಟೀಲ, ಲೋಕೋಪಯೋಗಿ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!