ಮಂಡ್ಯ ಲೋಕಸಬಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಗೆಲುವಿನತ್ತ ದಾಪುಗಾಲು ಇಟ್ಟಿದ್ದು, ಅಂಬರೀಶ್ ದಾಖಲೆ ಉಡೀಸ್ ಮಾಡಿದ್ದಾರೆ.
ಮಂಡ್ಯ, [ನ.06]: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಲೋಕಸಭಾ ಉಪಚುನಾವಣೆಯಲ್ಲಿ ಒಂದೂವರೆ ಲಕ್ಷ ಮತಗಳಿಗೂ ಹೆಚ್ಚು ಅಂತರ ಕಾಯ್ದಿರಿಸಿಕೊಂಡು ದಾಖಲೆಯ ಜಯದತ್ತ ದಾಪುಗಾಲಿಟ್ಟಿದ್ದಾರೆ.
ಮತ ಎಣಿಕೆಯ 8ನೇ ಸುತ್ತಿ ಮುಕ್ತಾಯದ ವೇಳೆಗೆ ಜೆಡಿಎಸ್ 2,66,806 ಮತ ಪಡೆದುಕೊಂಡರೆ, ಬಿಜೆಪಿ 1,02,470 ಮತಗಳಿಗೆ ಸಮಾಧಾನ ಪಟ್ಟುಕೊಂಡಿದೆ. ಈ ಮೂಲಕ ಶಿವರಾಮೇಗೌಡ ಅವರ ಗೆಲುವು ಬಹುತೇಕ ಖಚಿತವಾಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಅಂಬಿ ದಾಖಲೆ ಮುರಿದ ಶಿವರಾಮೇಗೌಡ
ಎಲ್.ಆರ್. ಶಿವರಾಮೇಗೌಡ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಂಬರೀಶ್ ಅವರ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.
1998ರಲ್ಲಿ ಅಂಬರೀಶ್ ಜಿ.ಮಾದೇಗೌಡ ಅವರನ್ನು ಭಾರಿ ಅಂತರದಿಂದ ಮಣಿಸಿದ್ದರು. ಆಗ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಂಬರೀಶ್ 4,31,439 ಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಮಾದೇಗೌಡ 2,50,916 ಮತ ಗಳಿಸಿದ್ದರು.
ಬರೋಬ್ಬರಿ 1,80,523 ಮತಗಳ ಅಂತರದಿಂದ ಅಂಬರೀಶ್ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿದ್ದರು. ಈ ಐತಿಹಾಸಿಕ ದಾಖಲೆ ಮುರಿಯುವತ್ತ ಶಿವರಾಮೇಗೌಡ ಹೆಜ್ಜೆ ಹಾಕಿದ್ದಾರೆ.