MLC Poll Result: ಬಿಜೆಪಿ ವಿರುದ್ಧ ತಿರುಗಿಬಿದ್ದ ಜಾರಕಿಹೊಳಿ, ಸೋಲಿಗೆ ಸ್ಫೋಟಕ ಕಾರಣ ಕೊಟ್ರು

By Suvarna News  |  First Published Dec 14, 2021, 8:29 PM IST

* ಬೆಳಗಾವಿ ವಿಧಾನಪರಿಷತ್ ಚುನಾವಣೆ ಫಲಿತಾಂಶ
* ಗೆದ್ದು ಬೀಗಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ
* ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠಗೆ ಸೋಲು
* ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಲಖನ್ ಜಾರಕಿಹೊಳಿ


ಬೆಳಗಾವಿ, (ಡಿ.14): ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ (Lakhan Jarkiholi) ಜಯಗಳಿಸಿದ್ದಾರೆ. ಈ ಜಯದ ಬೆನ್ನಲ್ಲೇ ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹೌದು....ಡಿಕೆಶಿ ಜೊತೆ ಬಿಜೆಪಿ(BJP) ನಾಯಕರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಸೋಲು ಕಂಡಿದ್ದಾರೆ ಎಂದು ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

Tap to resize

Latest Videos

undefined

Belagavi MLC Result:ಸ್ವಪ್ರತಿಷ್ಠೆಗಾಗಿ ಬಿಜೆಪಿಯನ್ನೇ ಸೋಲಿಸಿದ್ರಾ ರಮೇಶ್ ಜಾರಕಿಹೊಳಿ?

ಗೆದ್ದ ಬಳಿಕ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ  ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಮಾತನಾಡಿದ ಲಖನ್ ಜಾರಕಿಹೊಳಿ,  ಡಿಕೆ ಶಿವಕುಮಾರ್(DK Shivakumar) ಜೊತೆ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ (Mahantesh Kavatagimath) ಮ್ಯಾಚ್ ಫಿಕ್ಸಿಂಗ್ ಆಗಿದ್ದಾರೆ. ಮುಂದಿನ ದಿನಗಳಲ್ಲಿ ನಿಮಗೆ ಎಲ್ಲಾ ಗೊತ್ತಾಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಡಿಕೆಶಿ ಜೊತೆ ಬಿಜೆಪಿ ನಾಯಕರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಬಿಜೆಪಿಗೆ ಸೋಲಾಗಿದೆ. ಬಿಜೆಪಿ ನಾಯಕರು ಮಹಾನಾಯಕನ ಜೊತೆ  ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ರು. ಬಿಜೆಪಿ ಸೋಲು ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ತಲೆಗೆ ಕಟ್ಟುವ ಕೆಲಸ ಆಗ್ತಿದೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಇನ್ನು ಪಕ್ಷೇತರವಾಗಿ ನಿಂತು ಗೆದ್ದಿರುವುದರಿಂದ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಲಖನ್ ಜಾರಕಿಹೊಳಿ,  ಈಗ ಇಲ್ಲ. ಮುಂದೆ ವಿಚಾರ ಮಾಡೋಣ. ಜನರ ಆಶೀರ್ವಾದ, ದೇವರ ಆಶೀರ್ವಾದಿಂದ ಜಯ ಸಾಧಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿಯಲ್ಲಿ ಬಿಜೆಪಿಯ 13 ಶಾಸಕರಿದ್ದಾರೆ, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯರು ಇದ್ದಾರೆ. ಆದರೆ ಬಿಜೆಪಿ ಸೋಲಿಗೆ ರಮೇಶ್ ಜಾರಕಿಹೊಳಿ ಹೇಗೆ ಕಾರಣ ಆಗ್ತಾರೆ? ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ್ದು ಯಾರು ಎಂದು ಲಖನ್ ಜಾರಕಿಹೊಳಿ ಪ್ರಶ್ನಿಸಿದರು.

ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರಿಂದಲೇ ಬಿಜೆಪಿ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರು ಸೋಲಬೇಕಾಯ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ. ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಅವರೇ ಬಿಜೆಪಿ ಸೋಲಿಗೆ ಕಾರಣ ಎಂದು ಪಕ್ಷದ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಲಖನ್ ಜಾರಕಿಹೊಳಿ ಅವರು ಈ ಮಾತುಗಳನ್ನಾಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಸ್ಫೋಟವಾಗುತ್ತಾ ಬೆಳಗಾವಿ ಪಾಲಿಟಿಕ್ಸ್
ಯೆಸ್..ಈ ಹಿಂದೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿ ಇದ್ದ ಸಂದರ್ಭದಲ್ಲಿ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಬಿಗ್ ಫೈಟ್ ಆಗಿತ್ತು. ಅದು ಕಾಂಗ್ರೆಸ್‌ನಲ್ಲಿ ದೊಡ್ಡಮಟ್ಟಕ್ಕೆ ಹೋಗಿ, ಕೊನೆಗೆ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಕ್ಕೂ ಕಾರಣವಾಯ್ತು.  

ಇದೀಗ ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿದ್ದು, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಸೋಲಿಗೆ ಪರೋಕ್ಷ ಕಾರಣರಾಗಿದ್ದು, ಇದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಪರಿಷತ್ ಫಲಿತಾಂಶ ಏನಾದ್ರು ಹೈಕಮಂಡ್ ಗಂಭೀರವಾಗಿ ತೆಗೆದುಕೊಂಡು ರಮೇಶ್ ಜಾರಕಿಹೊಳಿ ಮೇಲೆ ಶಿಸ್ತು ಕ್ರಮಕ್ಕೆ ಮುಂದಾದ್ರೆ, ರಾಜ್ಯ ರಾಜಕಾರಣ ಅಲ್ಲೋಲ ಕಲ್ಲೋಲವಾಗುವುದು ಗ್ಯಾರಂಟಿ. 

ಕೈಸುಟ್ಟುಕೊಂಡ ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಈ ಚುನಾವಣೆಯಲ್ಲಿ ಸೋಲಿಸಲು ಹೋಗಿ ರಮೇಶ್ ಜಾರಕಿಹೊಳಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ(Mahantesh Kavatagimath) ಅವರನ್ನ ಬಲಿ ಪಡೆದುಕೊಂಡಿದ್ದು, ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ (Politics) ಗುದ್ದಾಟಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆಯ ಫಲಿತಾಂಶ ಎಲ್ಲಾ ಕ್ಷೇತ್ರಗಳಿಗಿಂತ ಅತಿ ಹೆಚ್ಚು ಮಹತ್ವ ಪಡೆದಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ಹೊರತಾಗಿಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರು. ಆದ್ರೆ, ಫಲಿತಾಂಶ ಬೇರೆಯೇ ಬಂದಿದೆ. ಇದರಿಂದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶಾಕ್‌ ನೀಡಲು ಹೋಗಿ ರಮೇಶ್ ಜಾರಕಿಹೊಳಿ ಕೈಸುಟ್ಟುಕೊಂಡಿದ್ದಾರೆ.
 
ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನ
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ. ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಪರಿಷತ್ ಮೆಟ್ಟಿಲು ಹತ್ತಿದ್ದಾರೆ.

ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದು, ಮೂರನೇ ಸ್ಥಾನಕ್ಕಿಳಿದ ಬಿಜೆಪಿ ಭಾರೀ ಮುಖಬಂಗ ಅನುಭವಿಸಿದೆ. ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಬೇಕು ಎಂಬ ಮಹಾಂತೇಶ ಕವಟಗಿಮಠ ಅವರ ಆಸೆ ನುಚ್ಚುನೂರಾಗಿದೆ.

ಬಿಜೆಪಿಯಲ್ಲೇ ಇದ್ದ ಲಖನ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ದ್ವೇಷ ತಾರಕಕ್ಕೇರಿದ್ದರಿಂದ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಬಿಜೆಪಿ ಸೇರಿದ್ದರು. 

ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಹಗರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿದ್ದರಿಂದ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ರಮೇಶ್, ಬಾಲಚಂದ್ರ ಮತ್ತು ಲಖನ್ ಜಾರಕಿಹೊಳಿ ಒಗ್ಗಟ್ಟಾಗಿದ್ದರು. ಸತೀಶ್ ಜಾರಕಿಹೊಳಿ ಬಲಗೈ ಬಂಟನಾಗಿದ್ದ ಸಹೋದರ ಲಖನ್ ಜಾರಕಿಹೊಳಿ ಆಶ್ಚರ್ಯಕರ ಬೆಳವಣಿಗೆಯಲ್ಲಿ ಬಿಜೆಪಿ ಪಾಳೇಯ ಸೇರಿದ್ದರು.

click me!