ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿಯಿಂದ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡದಿದ್ದರೆ ತಾವು ಕೂಡ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲ್ಲ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಅಥಣಿ (ಬೆಳಗಾವಿ) (ಮಾ.12): ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿಯಿಂದ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡದಿದ್ದರೆ ತಾವು ಕೂಡ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲ್ಲ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಚುನಾವಣೆಯಲ್ಲಿ ಅಥಣಿಯಲ್ಲಿ ನನ್ನ ತಂದೆ ಲಕ್ಷ್ಮಣ ಸವದಿ ಸ್ಪರ್ಧಿಸೋದು ಖಚಿತ ಎಂದು ಪುತ್ರ ಚಿದಾನಂದ ಸವದಿ ಹೇಳಿದ್ದಾರೆ. ಜತೆಗೆ ರಮೇಶ್ ಜಾರಕಿಹೊಳಿ ಅವರಿಗೆ ಕುಮಟಳ್ಳಿ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಗೋಕಾಕ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಡಲಿ ಎಂದು ತಿರುಗೇಟು ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಿದಾನಂದ ಸವದಿ, 2004ರಿಂದ ಬಿಜೆಪಿ ಸಂಘಟನೆಗೆ ನನ್ನ ತಂದೆ ಲಕ್ಷ್ಮಣ ಸವದಿ ಶ್ರಮಿಸುತ್ತಿದ್ದಾರೆ. 2019ರಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಸಂಗ ಬಂತು. ಕ್ಷೇತ್ರದ ಸಾವಿರಾರು ಕಾರ್ಯಕರ್ತರು, ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಅವರೇ ಸ್ಪರ್ಧಿಸಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಕೆಲ ರಾಜಕೀಯ ನಾಯಕರ ವೈಯಕ್ತಿಕ ಹೇಳಿಕೆಗಳಿಂದ ಗೊಂದಲ ಆಗುತ್ತಿದೆ. ಆದರೆ ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿಯವರೇ ಅಥಣಿಯಿಂದ ಸ್ಪರ್ಧಿಸಲಿದ್ದಾರೆ ಎಂದರು.
undefined
ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನು ಚುನಾವಣೆಗೆ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ
ಹೈಕಮಾಂಡ್ ಟಿಕೆಟ್ ನೀಡದಿದ್ದರೆ ಮುಂದಿನ ನಡೆ ಏನೆಂಬ ಪ್ರಶ್ನೆಗೆ, ಕೆಲ ಸಂದರ್ಭಗಳಲ್ಲಿ ವರಿಷ್ಠ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ. ಅದು ನಮ್ಮ ತಂದೆಯವರಿಗೂ ಅನ್ವಯಿಸುತ್ತದೆ. ಸ್ಥಳೀಯ ಶಾಸಕ, ಗೋಕಾಕ ಶಾಸಕರಿಗೂ ಅನ್ವಯಿಸುತ್ತದೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದರು. 2019ರಲ್ಲಿ ರಮೇಶ್ ಜಾರಕಿಹೊಳಿ ಅವರ ಜತೆಗೆ ಮಹೇಶ್ ಕುಮಟಳ್ಳಿ ಅವರು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು. ಈ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣೀಭೂತರಲ್ಲೊಬ್ಬರಾಗಿದ್ದರು.
ಜಾತಿ, ಧರ್ಮದ ವಿಷಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ: ರಮೇಶ್ ಜಾರಕಿಹೊಳಿ
2004ರಿಂದ ಬಿಜೆಪಿ ಸಂಘಟನೆಗೆ ನನ್ನ ತಂದೆ (ಲಕ್ಷ್ಮಣ ಸವದಿ) ಶ್ರಮಿಸುತ್ತಿದ್ದಾರೆ. 2019ರಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡಬೇಕಾಯಿತು. ಈಗ ಜನತೆ ಲಕ್ಷ್ಮಣ ಸವದಿ ಅವರನ್ನೇ ಬಯಸಿದ್ದಾರೆ. ಕೆಲವರ ಹೇಳಿಕೆ ಗೊಂದಲ ಮೂಡಿಸಿದೆ. ಆದರೆ, ಕ್ಷೇತ್ರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಈ ಬಾರಿ ಲಕ್ಷ್ಮಣ ಸವದಿ ಅಥಣಿಯಿಂದ ಸ್ಪರ್ಧಿಸಲಿದ್ದಾರೆ.
- ಚಿದಾನಂದ ಸವದಿ, ಲಕ್ಷ್ಮಣ ಸವದಿ ಪುತ್ರ