ಬಿಡಿಎ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಭಿಯೋಜನೆಗೆ ಕೋರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಪ್ರಕರಣವು ಖುಲಾಸೆಯಾಗಿದೆ. ಅಂತಹ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ಕೋರುವುದು ಸಮಂಜಸವಲ್ಲ. ಬಿಜೆಪಿ ವಿರುದ್ಧ ಷಡ್ಯಂತ್ರ ರಾಜಕಾರಣ ಮಾಡಲಾಗುತ್ತಿದೆ: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು(ನ.30): ಖುಲಾಸೆಯಾಗಿರುವ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಭಿಯೋಜನೆಗೆ ಅನುಮತಿ ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದನ್ನು ಗಮನಿಸಿದರೆ ಬಿಜೆಪಿ ನಾಯಕರ ವಿರುದ್ದ ಹಗೆತನದ ರಾಜಕೀಯ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಭಿಯೋಜನೆಗೆ ಕೋರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಪ್ರಕರಣವು ಖುಲಾಸೆಯಾಗಿದೆ. ಅಂತಹ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ಕೋರುವುದು ಸಮಂಜಸವಲ್ಲ. ಬಿಜೆಪಿ ವಿರುದ್ಧ ಷಡ್ಯಂತ್ರ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ರಾತ್ರೋರಾತ್ರಿ 14 ಸೈಟ್ ವಾಪಸ್ ಕೊಟ್ಟ ಕಳ್ಳ ಯಾರು? ಸಿಎಂ ವಿರುದ್ಧ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ!
ಅಬಕಾರಿ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದು, ಈ ಸಂಬಂಧ ಆಡಿಯೋ, ವಿಡಿಯೋಗಳಿವೆ. ಆದರೆ, ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಮದ್ಯ ಮಾರಾಟಗಾರರ ಸಂಘಟನೆಗಳು ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ 700 ಕೋಟಿ ರು. ಲಂಚ ಪಡೆದ ಆರೋಪ ಮಾಡಿವೆ. ಆದರೂ ಸಚಿವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಅಮಾನತಾದ ಅಧಿಕಾರಿಗಳು ಯಾರ ಏಜೆಂಟರು ಎಂಬುದನ್ನು ತಿಳಿಸಬೇಕು. ಅಲ್ಲದೇ, ಬಳ್ಳಾರಿಯಲ್ಲಿ ಬಾಣಂತಿಯರಸಾವು ಸಂಭವಿಸಿದೆ. ಔಷಧಿಗಳ ಕಳಪೆಯಿಂದಾಗಿ ಘಟನೆ ಸಂಭವಿಸಿದೆ. ಆರೋಗ್ಯ ಇಲಾಖೆಯನ್ನು ನಿಭಾಯಿಸುವಲ್ಲಿ ಸಚಿವ ದಿನೇಶ್ ಗುಂಡೂರಾವ್ ವಿಫಲರಾಗಿದ್ದಾರೆ. ಹೀಗಾಗಿ ತಿಮ್ಮಾಪುರ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಸರ್ಕಾರದಿಂದ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಿಎಂ ಸರ್ವಾಧಿಕಾರಿ ಧೋರಣೆ:
ಒಂದು ವಿಶ್ವವಿದ್ಯಾಲಯದ ಕುಲಾಧಿಪತಿ ಸ್ನಾನಕ್ಕೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಕೊಕ್ ಕೊಟ್ಟಿದ್ದು, ಇದು ಸರ್ವಾಧಿಕಾರಿ ಧೋರಣೆಯಾಗಿದೆ. ಅವರ ಮೇಲೆ ಭ್ರಷ್ಟಾಚಾರದ ಹಲವಾರು ಆರೋಪಗಳಿವೆ. ಕುಲಾಧಿಪತಿ ಸ್ಥಾನಕ್ಕೆ ರಾಜ್ಯಪಾಲರು ಯೋಗ್ಯರೆಂದು ಸಾಂವಿಧಾನಿಕ ಹುದ್ದೆಯಾಗಿ ಕೊಡಲಾಗಿದೆ. ಈಗ ಅದನ್ನು ವಾಪಸ್ ಪಡೆಯುವ ಮೂಲಕ ಕುಲಾಧಿಪತಿ ಆಗಲು ಮುಖ್ಯಮಂತ್ರಿಗಳು ಹೊರಟಿದ್ದಾರೆ. ಭ್ರಷ್ಟಾಚಾರದಿಂದ ಕಾಂಗ್ರೆಸ್ ಸರ್ಕಾರ ಕುಲಗೆಟ್ಟಿದ್ದು, ಕುಲಾಧಿಪತಿ ಸ್ಥಾನಕ್ಕೆ ಮುಖ್ಯಮಂತ್ರಿಗಳು ಯೋಗ್ಯರೇ ಎಂದು ಕಿಡಿಕಾರಿದರು.
ಬಿಎಸ್‌ವೈ ವಿರುದ್ಧ ತನಿಖೆ ಮುಡಾಕ್ಕೆ ಪ್ರತೀಕಾರವಲ್ಲ: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೈಗೊಂಡ ಪ್ರಾಸಿಕ್ಯೂಷನ್ ಶಿಫಾರಸು ತೀರ್ಮಾನವು ಮುಡಾ ಪ್ರಕರಣದ ಬಗೆಗಿನ ಪ್ರತೀಕಾರದ ಕ್ರಮ ಎಂಬ ಭಾವನೆ ಬೇಡ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಪಾದಿಸಿದ್ದಾರೆ.
ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇಪ್ರಾಥಮಿಕತನಿಖೆ ನಡೆದಿದ್ದು, ಅದರಆಧಾರದ ಮೇಲೆ ಪೂರ್ಣ ಪ್ರಮಾಣದ ತನಿಖೆ ನಡೆಸಬೇಕಿದೆ. ಅದಕ್ಕಾಗಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಲ್ಲಿ ಕೋರಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಯಾರು ಅಂತಾ ನನಗೆ ಗೊತ್ತಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಕಿಡಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್ .ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ಪ್ರಾಥಮಿಕ ಹಂತದ ತನಿಖೆ ನಡೆದಿದ್ದು, ಅದರ ಆಧಾರದ ಮೇಲೆ ಪೂರ್ಣಪ್ರಮಾಣದ ತನಿಖೆ ನಡೆಯಬೇಕಿದೆ. ಆದರೆ, ಈ ಹಿಂದೆ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಹೀಗಾಗಿ ಈ ಪ್ರಕರಣದಲ್ಲಿನ ಸತ್ಯಾಸತ್ಯ ಅರಿಯಲು ಪ್ರಾಸಿಕ್ಯೂಷನ್‌ಗೆ ಅನುಮತಿಸುವಂತೆ ರಾಜ್ಯಪಾಲರನ್ನು ಕೋರಲುಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಯಾವುದೇ ರೀತಿಯ ಪ್ರಾಥಮಿಕ ತನಿಖಾ ವರದಿ ಇರಲಿಲ್ಲ. ಆದರೆ, ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಪ್ರಾಥಮಿಕ ವರದಿ ನೀಡಿದೆ. ಹೀಗಾಗಿ ಮುಡಾ ಮತ್ತು ಯಡಿಯೂರಪ್ಪ ಪ್ರಕರಣಗಳನ್ನು ಹೋಲಿಕೆ ಮಾಡುವ ಅವಶ್ಯಕತೆಯಿಲ್ಲ ಎಂದರು.