
ಹಾಸನ(ಫೆ.05): ನಮ್ಮ (ಬಿಜೆಪಿ) ಹೋರಾಟ ಫಲವಾಗಿ ಈಗಾಗಲೇ ಒಬ್ಬ ಸಚಿವರು ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟಕಟೆಯಲ್ಲಿ ನಿಂತಿದ್ದು, ಅಧಿಕಾರದಿಂದ ಕೆಳಗಿಳಿಯಲು ಸಜ್ಜಾಗಿದ್ದಾರೆ ಎನ್ನುವ ಮೂಲಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಬದಲಾವಣೆ ಹೇಳಿಕೆಗೆ ಬದ್ಧ ಎಂದು ಪುನರ್ ಉಚ್ಚರಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆ ಮೂಲಕ ಬಡವರಿಗೆ ₹2000 ಅಲ್ಲ 5000 ಹಣ ಕೊಡಿ. ನಾವು ಬೇಡ ಎನ್ನುವುದಿಲ್ಲ. ಆದರೆ, ಉಚಿತ ಯೋಜನೆಗಳ ಮೂಲಕ ರಾಜ್ಯವನ್ನು ಗುಡಿಸಿ ಗುಂಡಾಂತರ ಮಾಡಿ, ನವೆಂಬರ್ 15 ಅಥವಾ 16ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೆ. ಆ ಬಳಿಕ ಡಿ. ಕೆ.ಶಿವಕುಮಾರ್ ಬರ್ತಾರೋ, ಪರಮೇಶ್ವರ ಬರ್ತಾರೋ ಅಥವಾ ಸತೀಶ್ ಜಾರಕಿಹೊಳಿ, ಯಾವ ಹುಳಿ ಬಂದರೂ ಸರ್ಕಾರದ ಬೊಕ್ಕಸದಲ್ಲಿ ಏನೂ ಉಳಿದಿರು ವುದಿಲ್ಲ. ನಮ್ಮ ರಾಜ್ಯದ ಬೊಕ್ಕಸ ಯಾವಾಗಲು ಖಾಲಿ ಆಗಿರಲಿಲ್ಲ. ಇಷ್ಟು ಪಾಪರ್ ಸರ್ಕಾರ ಇತಿಹಾಸದಲ್ಲಿಯೇ ಇಲ್ಲ ಎಂದು ಟೀಕಿಸಿದರು.
ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆ: ಅಶೋಕ್
ಕಾಂಗ್ರೆಸ್ ಬಂದ ಮೇಲೆ ರಾಜ್ಯಕ್ಕೆ ಸೂತಕ:
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕ ಸೂತಕದ ಮನೆಯಾ ಗಿದ್ದು, ರೈತರು, ಸಾಲ ಪಡೆದವರು, ಗುತ್ತಿಗೆದಾರರು ಹೀಗೆ ಸಾಲುಸಾಲು ಆತ್ಮಹತ್ಯೆ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಈವರೆಗೆ 25 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕುಂಬಮೇಳದಲ್ಲಿ 30 ಜನ ಮೃತಪಟ್ಟಿದ್ದಕ್ಕೆ ದೊಡ್ಡದಾಗಿ ಮಾತಾಡಿದ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ತಮ್ಮದೇ ತಪ್ಪಿನಿಂದ 25 ಜನ ಸತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಣುತ್ತಿಲ್ಲ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ 2500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಆರೋಪಿಸಿದರು.
ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆ: ಅಶೋಕ್
ರಾಜ್ಯದಲ್ಲಿ ಕೊಲೆ ಸುಲಿಗೆ ಹೆಚ್ಚಾಗಿದ್ದು, ಗೃಹ ಸಚಿವರು ಇದ್ದು ಇಲ್ಲದಂತಾಗಿದೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಸಿಎಂ, ಸಚಿವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ ಹೊರತು ಯಾವುದೇಕ್ರಮ ಕೈಗೊಳ್ಳುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸಿಎಂ ಗುಡುಗಿದ್ರೆ ರೌಡಿಗಳು ರಾಜ್ಯವಲ್ಲ ದೇಶ ಬಿಟ್ಟು ಹೋಗ್ತಾರೆ. ಆದರೆ, ನಮ್ಮ ಸಿಎಂ ಗುಡುಗಿದರೂ ಏನೂ ಆಗಿಲ್ಲ. ವರ್ಗಾವಣೆ ದಂಧೆಯಿಂದ ಬಂದ ಪೊಲೀ ಸರು ಸರ್ಕಾರಕ್ಕೆ ಹೆದರುತ್ತಿಲ್ಲ ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಂದಾಗ ಕರ್ನಾಟಕದ ಸ್ಥಿತಿ-ಗತಿಗಳನ್ನು ವಿವರಿಸಿದ್ದೇನೆ. ನಾನು ಕೂಡ ದೆಹಲಿ ನಾಯಕರ ಜತೆ ಸಂಪರ್ಕದಲ್ಲಿದ್ದೇನೆ. ಮುಂದಿನ ಹದಿನೈದು-ಇಪ್ಪತ್ತು ದಿನಗಳಲ್ಲಿ ಸ್ಪಷ್ಟ ತೀರ್ಮಾನ ಹೊರಬೀಳಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.