ಡಿ.ಕೆ.ಶಿವಕುಮಾರ್ ಅವರು ನಿನ್ನ ಆಸ್ತಿ ಇಷ್ಟಿದೆ, ಅವನ ಆಸ್ತಿ ಎಷ್ಟಿದೆ ಅಂತ ಕೇಳಿದ್ದಾರೆ. ನಾವು ವರ್ಷಗಳಿಂದ ನಿಮ್ಮ ಆಸ್ತಿ ವಿವರ ಕೇಳುತ್ತಲೇ ಇದ್ದೇವೆ. ನೀವು ಕೊಟ್ಟಿಲ್ಲ. ನಾವಿಲ್ಲಿ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕೆಂದು ಬಂದಿದ್ದೇವೆ. ಆದರೆ, ನಮಗಿಂತ ಮೊದಲೇ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅಧಿಕಾರದಿಂದ ಬೇಗ ಇಳಿಯಲೆಂದು ಜನಾಂದೋಲನ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದ ಆರ್.ಅಶೋಕ್
ಚನ್ನಪಟ್ಟಣ/ರಾಮನಗರ(ಆ.06): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ದೆಹಲಿ ನಾಯಕರ ಸಪೋರ್ಟ್ ಏಕೆ ಬೇಕು?. ಹಣ ಕೊಟ್ಟು ಅವರನ್ನು ಏಕೆ ಕರೆಸಿದ್ದೀರಿ. ಧೈರ್ಯ ಇದ್ದಿದ್ದರೆ ನೀವೇ ಎದುರಿಸಬಹುದಿತ್ತಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಮೈಸೂರು ಚಲೋದ 3ನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಆಗಿದ್ದಾರೆ. ಅವರಿಗೆ ನೈತಿಕತೆ ಇದ್ದಿದ್ದರೆ ದೆಹಲಿ ನಾಯಕರ ಬೆಂಬಲ ಪಡೆಯುತ್ತಿರಲಿಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಮಿತ್ ಶಾ ಬೆದರಿಕೆಗೆ ಹೆದರಿದ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಭಾಗಿ: ಭಂಡಾರಿ
ಡಿ.ಕೆ.ಶಿವಕುಮಾರ್ ಅವರು ನಿನ್ನ ಆಸ್ತಿ ಇಷ್ಟಿದೆ, ಅವನ ಆಸ್ತಿ ಎಷ್ಟಿದೆ ಅಂತ ಕೇಳಿದ್ದಾರೆ. ನಾವು ವರ್ಷಗಳಿಂದ ನಿಮ್ಮ ಆಸ್ತಿ ವಿವರ ಕೇಳುತ್ತಲೇ ಇದ್ದೇವೆ. ನೀವು ಕೊಟ್ಟಿಲ್ಲ. ನಾವಿಲ್ಲಿ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕೆಂದು ಬಂದಿದ್ದೇವೆ. ಆದರೆ, ನಮಗಿಂತ ಮೊದಲೇ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅಧಿಕಾರದಿಂದ ಬೇಗ ಇಳಿಯಲೆಂದು ಜನಾಂದೋಲನ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಆರ್.ಅಶೋಕ್ ಅವರು ಲೇವಡಿ ಮಾಡಿದರು.