ಜೆಡಿಎಸ್ ನಾಯಕರು ಅವರ ಕಾರ್ಯಕರ್ತರನ್ನು ಒಪ್ಪಿಸಿ ಯೋಗೇಶ್ವರ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ತಯಾರಾಗಿದ್ದರು. ನಾನು ಸೇರಿ ಬಿಜೆಪಿಯ ಎಲ್ಲಾ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್ ಸಿಗಲುಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಪಕ್ಷ ತೊರೆದು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಲೀಡ್ ಸಿಗುವುದಿಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು(ಅ.24): ಯೋಗೇಶ್ವರ್ ಕಾಂಗ್ರೆಸ್ ಸೇರುವ ಮುಖಾಂತರ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿ ಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ಗೆಲ್ಲಲು ಸಾಧ್ಯವೇ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಅವರ ಕಾರ್ಯಕರ್ತರನ್ನು ಒಪ್ಪಿಸಿ ಯೋಗೇಶ್ವರ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ತಯಾರಾಗಿದ್ದರು. ನಾನು ಸೇರಿ ಬಿಜೆಪಿಯ ಎಲ್ಲಾ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್ ಸಿಗಲುಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಪಕ್ಷ ತೊರೆದು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಲೀಡ್ ಸಿಗುವುದಿಲ್ಲ ಎಂದರು.
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ
ಕಾಂಗ್ರೆಸ್‌ನ ಕೊನೇ ಸಾಲಲ್ಲಿ ಸಿಪಿವೈ: ಎನ್‌ಡಿಎ ಮೈತ್ರಿಯಲ್ಲಿ ಯೋಗೇಶ್ವರ್ ಗೆ ಹಿರಿತನವಿತ್ತು. ಈಗ ಕಾಂಗ್ರೆಸ್ ಸೇರಿ ಕೊನೆ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್ ಸೇರಿದಾಕ್ಷಣ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಮುಂದೆ ಅವರನ್ನು ಹೇಗೆ ತುಳಿಯಬೇಕು ಎಂದು ಅವರೇ ಯೋಜನೆ ರೂಪಿಸುತ್ತಾರೆ. ಯೋಗೇಶ್ವರ್‌ಗೆ ಕಾಂಗ್ರೆಸ್‌ನಲ್ಲಿ ಮುಂದೆ ಬರಲು ಯಾರೂ ಬಿಡುವುದಿಲ್ಲ ಎಂದು ಹೇಳಿದರು.