
ಬೆಂಗಳೂರು(ಆ.16): ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕರೂ ಆದ ಕೃಷ್ಣ ಭೈರೇಗೌಡ ಅವರು ಅತ್ಯಂತ ಅಸಹಾಯಕರಾಗಿ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೊಳ್ಳುತ್ತಿರುವುದನ್ನು ನೋಡಿದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರಸ್ತೆಯ ಸರ್ವಿಸ್ ರಸ್ತೆಯ ವಿಡಿಯೋ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ್, ಕೃಷ್ಣ ಭೈರೇಗೌಡರೇ ಆದೇಶ ಮಾಡಿ ಕೆಲಸ ಮಾಡಿಸ ಬೇಕಾದ ಸ್ಥಾನದಲ್ಲಿರುವ ತಾವು ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟೊಂದು ಅಸಹಾಯಕರಾಗಿ ಅಂಗಲಾಚುತ್ತಿದ್ದೀರಲ್ಲಾ, ಬೆಂಗಳೂರು ಅಭಿವೃದ್ಧಿ ಸಚಿವರು ತಮ್ಮ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಡುತ್ತಿದ್ದೀರೋ ಅಥವಾ ಇದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಬಂಡಾಯದ ಮುನ್ಸೂಚನೆಯೋ ಎಂದು ಪ್ರಶ್ನಿಸಿದ್ದಾರೆ.
ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್.ಅಶೋಕ್
ಮುಂದುವರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ತಮ್ಮ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ಒಂದು ಸ್ವಲ್ಪವೂ ತಾಳ ಮೇಳವಿಲ್ಲವೇ? ಒಬ್ಬ ಸಚಿವ ಮತ್ತೊಬ್ಬ ಸಚಿವರ ಕರೆ ಸ್ವೀಕರಿಸುವುದಿಲ್ಲವೇ? ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.