
ಚನ್ನಪಟ್ಟಣ(ನ.12): ದೇವೇಗೌಡರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಮಾತನಾಡುವ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಧೈರ್ಯ ಇದ್ದರೆ ಚನ್ನಪಟ್ಟಣಕ್ಕೆ ಬರಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡಿ ಮಾತನಾಡಿ, ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇನೆ ಎಂದರೆ ಅರ್ಥವೇನು? ಖರೀದಿಗೆ ಪಾಕಿಸ್ತಾನದಿಂದ ಹಣ ಬಂದಿದೆಯಾ? ಒಕ್ಕಲಿಗ ಸಮುದಾಯ ಅಥವಾ ಇಡೀ ಹಿಂದು ಗಳನ್ನು ಖರೀದಿಸುವ ಹುನ್ನಾರ ನಡೆಯುತ್ತಿದೆಯೇ? ನಾವು ಅರಬ್‌ನಿಂದ ಬಂದವರಲ್ಲ.
ಆರ್.ಅಶೋಕ್ ಹೇಳಿಕೆಗೆ ತಲೆಯೂ ಇಲ್ಲ, ಬಾಲವೂ ಇಲ್ಲ: ಸಚಿವ ಚಲುವರಾಯಸ್ವಾಮಿ
ಈ ರೀತಿ ಮಾತನಾಡುವವರನ್ನು ಇಟ್ಟುಕೊಂಡ ಕಾಂಗ್ರೆಸ್‌ಗೆ ಮಾನ ಮರ್ಯಾದೆ ಇಲ್ಲ. ದೇವಸ್ಥಾನಗಳನ್ನು ವಕ್ಫ್ ಹೆಸರಿನಲ್ಲಿ ಲೂಟಿ ಮಾಡುತ್ತಿರುವ ಜಮೀರ್ ತಾಕತ್ತಿದ್ದರೆ ಚನ್ನಪಟ್ಟಣಕ್ಕೆ ಬರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.