ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳು ಅರ್ಹರಿಗೆ ತಲುಪಲಿ: ಶಾಸಕ ಸಿ.ಸಿ.ಪಾಟೀಲ್

By Kannadaprabha News  |  First Published Jan 7, 2024, 1:21 PM IST

ಕೇಂದ್ರ ಸರ್ಕಾರದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿ ಮಾಡುತ್ತಿರುವ ಎಲ್ಲಾ ಯೋಜನೆಗಳು ದೇಶದ ಪ್ರತಿ ಗ್ರಾಮದ ಅರ್ಹ ಫಲಾನುಭವಿಯನ್ನು ತಲುಪುವಂತಾಗಲಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು. 
 


ಹೊಳೆಆಲೂರ (ಜ.07): ಕೇಂದ್ರ ಸರ್ಕಾರದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿ ಮಾಡುತ್ತಿರುವ ಎಲ್ಲಾ ಯೋಜನೆಗಳು ದೇಶದ ಪ್ರತಿ ಗ್ರಾಮದ ಅರ್ಹ ಫಲಾನುಭವಿಯನ್ನು ತಲುಪುವಂತಾಗಲಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು. ಸಮೀಪದ ಮೆಣಸಗಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ದೇಶದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿ ಪಡಿಸುವುದಕ್ಕಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಸಹಿ ಪೋಶನ್ ದೇಶ್ ರೋಷನ್ ಯೋಜನೆ ಇಂತಹ 10 ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆಯುಷ್ಮಾನ್ ಭಾರತ ಯೋಜನೆ ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣಾ ಯೋಜನೆಯಾಗಿದೆ. ದೇಶದ ಉದ್ದಗಲಕ್ಕೂ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳ ಮೂಲಕ ಉತ್ತಮ ಗುಣಮಟ್ಟದ ಔಷಧಗಳು ಜನರಿಗೆ ಕೈಗೆಟುವ ದರದಲ್ಲಿ ಲಭ್ಯವಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಭೂತಪೂರ್ವದ ಬದಲಾವಣೆಯಾಗಿ ಎಲ್ಲರೂ ಬ್ಯಾಂಕಿನ ವ್ಯಾಪ್ತಿಗೆ ಒಳಪಡುವಂತಾಗಿದೆ ಎಂದು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Tap to resize

Latest Videos

ಅಧಿಕಾರಕ್ಕಾಗಿ ಬಿಜೆಪಿ ಹುಸಿ ಭರವಸೆ ನೀಡುವುದಿಲ್ಲ: ಸಂಸದ ಮುನಿಸ್ವಾಮಿ

ಈ ವೇಳೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ಪ್ರಧಾನ ಮಂತ್ರಿ ವಿಮಾ ಯೋಜನೆ ಅಡಿಯಲ್ಲಿ ವಿಮಾದಾರ ನೀಲವ್ವ ಚಲವಾದಿ ಅವರು ತಮ್ಮ ಪತಿ ನಿಧನ ನಂತರ ತಮಗೆ ಎರಡು ಲಕ್ಷ ರುಪಾಯಿ ಬ್ಯಾಂಕಿನಿಂದ ವಿಮೆ ಹಣ ಜಮಾ ಆಗಿರುವ ಕುರಿತು ಆ ಮೂಲಕ ತಮ್ಮ ಕುಟುಂಬಕ್ಕೆ ಆಗಿರುವ ಅನುಕೂಲದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಈಶ್ವರಪ್ಪ ಮುದೇನೂರು ವಹಿಸಿದ್ದರು. ರಾಜಮಟ್ಟದ ಬ್ಯಾಂಕರ್ಸ್ ಕಮಿಟಿಯಿಂದ ಎಲ್.ಡಿ.ಎಂ, ಆರೋಗ್ಯ ಇಲಾಖೆ ಸಿಬ್ಬಂದಿ ಪಂಚಾಯಿತಿ, ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ ಭಾಗವಹಿಸಿದ್ದರು.

ಒಂದು ಸಮುದಾಯ ಗುರಿಯಾಗಿಸಿಕೊಂಡು ಜಾತಿ ಗಣತಿ: ಜಾತಿ ಜನಗಣತಿಯನ್ನು ನಾಲ್ಕು ಗೋಡೆ ಮಧ್ಯೆ ನಡೆಸಲಾಗಿದೆ. ಅದರಲ್ಲಿಯೂ ಲಿಂಗಾಯತ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಗಣತಿ ಮಾಡಿದ್ದು, ಅದನ್ನು ಬಲವಾಗಿ ವಿರೋಧಿಸುತ್ತೇವೆ. ಶಾಸಕ ವಿನಯ ಕುಲಕರ್ಣಿ ನೇತೃತ್ವದಲ್ಲಿ ಸಹಿ ಸಂಗ್ರಹ ಚಳವಳಿ ಆರಂಭವಾಗಿದೆ. ನಾನು ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಜಾತಿ ಗಣತಿ ವಿರೋಧಿಸಿ ಸಹಿ ಹಾಕಿದ್ದೇವೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಈ ಮಟ್ಟಕ್ಕೆ ಇಳಿಬಾರದು: ಸಚಿವ‌ ರಾಜಣ್ಣ ತಿರುಗೇಟು

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮ್ಮೇಳನದಲ್ಲಿ ಗದಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತೇವೆ, ಜಾತಿ ಗಣತಿಯನ್ನು ಸ್ಪಷ್ಟವಾಗಿ ವಿರೋಧಿಸುತ್ತೇವೆ. ಯಾರಿಗೆ ಏನು ಸಿಗಬೇಕೋ, ಯಾವ ಯಾವ ಜಾತಿಗೆ ಎಷ್ಟು ಸೌಲಭ್ಯ ಸಿಗಬೇಕೋ ಅದು ಅವರ ಹಕ್ಕು ಅದು ದೊರೆಯಬೇಕು. ಆದರೆ ಅದು ಜನಸಂಖ್ಯೆಯ ಅನುಗುಣವಾಗಿ ಸಿಗಬೇಕು ಎನ್ನುವುದು ನಮ್ಮ ಅಭಿಪ್ರಾಯ, ಸಂವಿಧಾನ ಬದ್ಧವಾಗಿ ಎಲ್ಲರಿಗೂ ಸೌಲಭ್ಯ ಸಿಗಬೇಕು ಅದಕ್ಕೆ ನಮ್ಮ ವಿರೋಧವಿಲ್ಲ, ಎಲ್ಲೋ ನಾಲ್ಕು ಗೋಡೆಗಳ ಮಧ್ಯೆ ಕುಳಿತು, ಅಲ್ಲೇ ಗಣತಿ ಮಾಡಿದಂತೆ ಸಿದ್ಧಪಡಿಸಿಕೊಂಡಿರುವ ಜಾತಿಗಣತಿಗೆ ಮಾತ್ರ ನಮ್ಮ ವಿರೋಧವಿದೆ. ಹೊಸದಾಗಿ ಜಾತಿಗಣತಿಯಾಗಬೇಕು ಎನ್ನುವುದು ನಮ್ಮ ಬಲವಾದ ಆಗ್ರಹ ಎಂದರು.

click me!