ಜಿಲ್ಲೆಯಲ್ಲಿ ಶೇ.50 ಹೆಚ್ಚು ಮಳೆ ಕೊರತೆ ಹಾಗೂ ಬೆಳೆ ನಷ್ಟ ಆಗಿರುವುದರಿಂದ ಕೂಡಲೇ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ (ಸೆ.10): ಜಿಲ್ಲೆಯಲ್ಲಿ ಶೇ.50 ಹೆಚ್ಚು ಮಳೆ ಕೊರತೆ ಹಾಗೂ ಬೆಳೆ ನಷ್ಟ ಆಗಿರುವುದರಿಂದ ಕೂಡಲೇ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರ ಹೊರವಲಯದ ಜಿಲ್ಲಾಡಳಿತ ಭವನದ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ (ದಿಶಾ)ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಳೆ ಕೊರತೆ ಆಗಿರುವುದರಿಂದ ಕೃಷಿ ಚಟುವಟಿಕೆಗಳು ಕುಂಠಿತವಾಗಿದ್ದು, ರೈತರಿಗೆ ಪರ್ಯಾಯ ಬೆಳೆಗಳನ್ನು ಬೆಳೆಯಲು ಕೃಷಿ ಅಧಿಕಾರಿಗಳು ಅರಿವು ಮೂಡಿಸಬೇಕು.
ಜಲಜೀವನ್ ಮಿಷನ್ ಯೋಜನೆಯಡಿಯ ಕಾಮಗಾರಿಗಳು ಅನಿವಾರ್ಯ ಕಾರಣಗಳಿಂದ ಕಳೆದ ಎರಡು ತ್ರೈಮಾಸಿಕ ಅವಽಯಲ್ಲಿ ಕುಂಠಿತವಾಗಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿಗಳಿಗೆ ವೇಗ ನೀಡಿ, ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹೆಚ್.ಪುಟ್ಟಸ್ವಾಮಿಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಮುಖ್ಯ ಯೋಜನಾ ನಿರ್ದೇಶಕಿ ಧನುರೇಣುಕ, ದಿಶಾ ಸಮಿತಿ ಸದಸ್ಯರು, ಅಧಿಕಾರಿಗಳು ಇದ್ದರು.
ಅರಣ್ಯ ಜಮೀನು ತೆರವು: ಕಾಂಗ್ರೆಸ್ ಸರ್ಕಾರದ ವಿರುದ್ದ ಸಂಸದ ಮುನಿಸ್ವಾಮಿ ಆಕ್ರೋಶ
ಕೆಲಸ ಮಾಡದವರು ಮಾತಾಡಬೇಡಿ: ಸಂಸದ ಬಿ.ಎನ್.ಬಚ್ಚೇಗೌಡರು ಚುನಾವಣೆ ಸಂದರ್ಭದಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಈಗ ಬಿಜೆಪಿ ಪಕ್ಷ ಹಾಗೂ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಕಿಡಿಕಾರಿದರು.
ಸಂಸದ ಬಚ್ಚೇಗೌಡರು ಇತ್ತೀಚೆಗೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಹಾಗೂ ಹಿಂದಿನ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಅವರು ಪಕ್ಷದ ಕಾರ್ಯ ಚಟುವಟಿಕೆಗೆ ಬಳಕೆ ಮಾಡಿಕೊಂಡಿಲ್ಲ ಎಂಬ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಶಿಷ್ಟಾಚಾರವಾಗಿ ಎಲ್ಲಾ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಿ ಆಹ್ವಾನ ಪ್ರತಿಕೆ ಕಳುಹಿಸುತ್ತಿದ್ದೆ. ಅವರಿಗೆ ಯಾವುದೇ ಕಾರ್ಯಕ್ರಮಕ್ಕೆ ಬರೋಕೆ ಮುಖ ಇರ್ತಿರಲಿಲ್ಲ ಎಂದು ಹೇಳಿದರು.
ಸಭಾಧ್ಯಕ್ಷನಾಗಿ ಸ್ಥಾನದ ಘನತೆ ಉಳಿಸುವ ಕೆಲಸ ಮಾಡುವೇ: ಯು.ಟಿ.ಖಾದರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಿದ್ದು ಎರಡು ಜಿಲ್ಲೆಯಲ್ಲಿ ಒಬ್ಬ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ. ಪ್ರಮುಖವಾಗಿ ಸಂಸದರ 5 ಕೋಟಿ ಅನುದಾನ ಪಡೆದು ಜಿಲ್ಲೆಯ ಯಾವುದೇ ತಾಲೂಕಿಗೆ 1 ರುಪಾಯಿ ಅನುದಾನ ಕೊಟ್ಟಿಲ್ಲ. ಇದನ್ನು ಪ್ರಶ್ನೆ ಮಾಡಲು ಅಲ್ಲಿನ ಕಾರ್ಯಕರ್ತರು ಕಾಯುತ್ತಿದ್ದರು. ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ಸಭೆ, ಸಮಾರಂಭಗಳಿಗೂ ಬರುತ್ತಿರಲಿಲ್ಲ. ಅದನ್ನು ಬಿಟ್ಟು ವಿನಾಕಾರಣ ಬಿಜೆಪಿ ಪಕ್ಷ ಅಥವಾ ನನ್ನ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದರು.