ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ: ಈಶ್ವರಪ್ಪ

Published : Apr 26, 2023, 01:10 AM IST
ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ: ಈಶ್ವರಪ್ಪ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು (ಏ.26) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ(Chikkamagaluru assembly constituency)ದ ನಿಡಘಟ್ಟಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮಾತನಾಡಿದ ಕೆ.ಎಸ್‌.ಈಶ್ವರಪ್ಪ(KS Eshwarappa), ಈ ಚುನಾವಣೆಯಲ್ಲಿ ಸಿ.ಟಿ.ರವಿ (CT Ravi)ಅವರನ್ನು ನೀವು ಗೆಲ್ಲಿಸಬೇಕು, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.

ಸೋಮವಾರ ಮೈಸೂರಿನಲ್ಲಿ ಸಿ.ಟಿ.ರವಿ ಮಾತನಾಡುವ ವೇಳೆಯಲ್ಲಿ ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಎಲ್ಲ ಕಡೆಯಲ್ಲೂ ನಾನು ಸಿಎಂ ಆಗಬೇಕೆಂಬ ಅಪೇಕ್ಷೆ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್‌ ಸೋಲಲೆಂದೇ ಸಿದ್ದು ಲಿಂಗಾಯತ ವಿರೋಧಿ ಹೇಳಿಕೆ: ಸಿ.ಟಿ.ರವಿ

ಡಿಕೆಶಿ, ಸಿದ್ದುಗೆ ಜೈಲು ಖಚಿತ:

ಇನ್ನು ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್‌.ಈಶ್ವರಪ್ಪ, ಜಾಮೀನಿನ ಮೇಲಿರುವ ಡಿ.ಕೆ.ಶಿವಕುಮಾರ್‌(DK Shivakumar), ಅರ್ಕಾವತಿ ಬಡಾವಣೆ ಹಗರಣದಲ್ಲಿ ಸಿದ್ದರಾಮಯ್ಯ(Siddaramaiah) ಮುಂದೊಂದು ದಿನ ಜೈಲಿಗೆ ಹೋಗುವುದು ಖಚಿತ ಎಂದರು. ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಹಗರಣದಲ್ಲಿ .8000 ಕೋಟಿ ಲೂಟಿ ಹೊಡೆದಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆಂಪಯ್ಯ ವರದಿ ಕೊಟ್ಟಿದ್ದಾರೆ. ಇದನ್ನು ಕಾಂಗ್ರೆಸ್‌ ಮುಚ್ಚಿಟ್ಟಿದೆ. ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿನಲ್ಲಿದ್ದು ಬಂದವರು. ಇವರು ಜೈಲಿಗೆ ಹೋಗುವುದು ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ವಿಧಾನಸಭಾ ಚುನಾವಣೆ ಹಿನ್ನೆಲೆ: ಲಿಂಗಾಯತರ ಮತ ಸೆಳೆಯಲು ಬಿಎಸ್‌ವೈ ಮನೆಯಲ್ಲಿ ಮಹತ್ವದ ಸಭೆ

ರಾಷ್ಟ್ರದ್ರೋಹಿ ಮುಸ್ಲಿಮರ ಮತ ನಮಗೆ ಬೇಡ ಎಂದು ಹೇಳಿದ್ದೇನೆ. ಎಲ್ಲಾ ಮುಸಲ್ಮಾನರು ರಾಷ್ಟ್ರದ್ರೋಹಿಗಳು ಎಂದು ನಾವೆಂದೂ ಹೇಳಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಹೀಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಬಿಜೆಪಿ. ಕೋಮುವಾದಿಗಳಾರು, ಜಾತಿವಾದಿಗಳಾರು ಎನ್ನುವುದನ್ನು ಈ ಬಾರಿ ಜನ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!