
ಬೆಳಗಾವಿ(ಸೆ.29): 6 ಸಾವಿರ ಕೋಟಿ ಮೊತ್ತದ ಎಲೆಕ್ಟೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ ನಂತರ ಸಿದ್ದರಾಮಯ್ಯ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಮಾತನಾಡಿ, ರಾಜಕೀಯ ಪ್ರೇರಿತವಾಗಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿ ಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಶುದ್ಧೀಕರಣಕ್ಕೆ ಈಶ್ವರಪ್ಪ ಮನೆಯಲ್ಲಿ ಸಭೆ: ಶಾಸಕ ರಮೇಶ್ ಜಾರಕಿಹೊಳಿ
ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.