
ಬೆಂಗಳೂರು(ಮಾ.19): ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಥವಾ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂಬುದನ್ನು ಸರ್ವಾನುಮತದಿಂದ ತಿಳಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಬಹಳಷ್ಟು ಮಂದಿ ಸಮರ್ಥರಿದ್ದಾರೆ. ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ, ಅದಕ್ಕೆ ನಾವು ಬದ್ಧವಾಗಿರುತ್ತೇವೆ. ಮಾ.25ಕ್ಕೆ ಅಭ್ಯರ್ಥಿ ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ ಎಂದರು.
ಬಿಜೆಪಿ ವಿರುದ್ಧ ಜೆಡಿಎಸ್ ಗರಂ: ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದ ಎಚ್‌ಡಿಕೆ
ಮಂಡ್ಯ ಕ್ಷೇತ್ರದಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಇದ್ದು, ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ಅತ್ಯಂತ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ. ಕುಮಾರಸ್ವಾಮಿ ಅವರ ಋಣ ತೀರಿಸಬೇಕು ಎನ್ನುವ ಅಭಿಪ್ರಾಯವು ಜಿಲ್ಲೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರಲ್ಲಿ ಒತ್ತಾಯ ಮಾಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.