
ಬೆಂಗಳೂರು(ಅ.25): ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಬೇರೆಯವರ ಮೇಲೆ ಆರೋಪ ಹೊರಿಸಿರುವುದು ನಿರರ್ಥಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ನಾನು ಕ್ರಿಕೆಟ್ ನೋಡಲು ಹೋಗಿದ್ದಕ್ಕೆ ಟೀಕೆ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದೂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಇದ್ದರೂ ಸಿಎಂ, ಡಿಸಿಎಂಕ್ರಿಕೆಟ್ ವೀಕ್ಷಣೆ: ಎಚ್‌ಡಿಕೆ ಕಿಡಿ
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಕೆಟ್ ಕೂಡ ಒಂದು ಕ್ರೀಡೆ. ಕ್ರೀಡೆಯನ್ನು ಪ್ರೋತ್ಸಾಹಿಸುವುದು, ಬೆಂಬಲಿಸುವುದು ಆಡಳಿತದ ಒಂದು ಭಾಗ. ಆ ಹಿನ್ನೆಲೆಯಲ್ಲಿ ನಾನು ಕ್ರಿಕೆಟ್ ನೋಡಲು ತೆರಳಿದ್ದೆ ಎಂದು ಪ್ರತಿಪಾದಿಸಿದರು.
ಕಾವೇರಿ ವಸತಿಗೃಹವನ್ನು ಅಂದು ಮುಖ್ಯಮಂತ್ರಿ ಆಗಿದ್ದವರು ಹಿಂದಿರುಗಿಸಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿಕೆಗೆ ಉತ್ತರಿಸುತ್ತಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.