
ಬೆಂಗಳೂರು (ಮೇ.22): ಹಿಂದಿನ ಸರ್ಕಾರದ ಹಗರಣಗಳನ್ನು ತನಿಖೆ ಮಾಡಲಾಗುವುದು ಎಂಬ ನೂತನ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆಗೆ ‘ತನಿಖೆ ಮಾಡಲಿ. ನಾವು ಹೆದರುವುದಿಲ್ಲ’ ಎಂದು ಬಿಜೆಪಿ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಪಾಟೀಲ್ ಅವರಿಂದ ಇಂಥ ಹೇಳಿಕೆ ಬಂದಿರುವುದು ಸಹಜ. ಆದರೆ, ನಾವು ಇಂಥದ್ದಕ್ಕೆಲ್ಲ ಹೆದರುವುದಿಲ್ಲ. ತನಿಖೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಹಗರಣಗಳು ನಡೆದಿದ್ದರೆ ಅವುಗಳ ಬಗ್ಗೆ ತನಿಖೆ ಮಾಡಲಿ ಎಂದು ತಿಳಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಹಗರಣವಾಗಿದ್ದರೆ ಆ ಬಗ್ಗೆ ಕಾಲಮಿತಿಯೊಳಗೆ ತನಿಖೆ ನಡೆಸಲಿ ಎಂದು ಹೇಳಿದರು. ಇದರೊಂದಿಗೆ ಕೆಂಪಣ್ಣ ಆಯೋಗದ ವರದಿ ಆಧರಿಸಿ ಎಫ್‌ಐಆರ್ ದಾಖಲಿಸಬೇಕು. ಆಗ ಬೊಕ್ಕಸಕ್ಕೆ ಎಂಟು ಸಾವಿರ ಕೋಟಿ ರು. ನಷ್ಟವಾಗಲು ಹೊಣೆಗಾರರು ಯಾರು ಎಂಬುದು ರಾಜ್ಯದ ಜನರಿಗೆ ತಿಳಿಯಲಿದೆ.
ಮಂತ್ರಿ ಸ್ಥಾನಕ್ಕಾಗಿ ಸಿಎಂ, ಡಿಸಿಎಂಗೆ ಮನವಿ ಮಾಡುವೆ: ಭದ್ರಾವತಿ ಶಾಸಕ ಸಂಗಮೇಶ್ವರ್
ಎಂಟು ಕೋಟಿ ರು. ನಷ್ಟ ಉಂಟು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಎಂಟು ಸಾವಿರ ಕೋಟಿ ಹಣ ವಾಪಸ್ ಬರಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್‌ನವರು ಈಗಾಗಲೇ ಹಲವಾರು ಭಾಗ್ಯಗಳನ್ನು ಘೋಷಿಸಿದ್ದಾರೆ. ಆ ಭಾಗ್ಯಗಳನ್ನು ಜಾರಿಗೊಳಿಸಲು ಹಣಕಾಸಿನ ಸಂಕಷ್ಟವಿದೆ. ಎಂಟು ಸಾವಿರ ಕೋಟಿ ಬಂದರೆ ಕೋಟ್ಯಂತರ ಜನರಿಗೆ ನೆರವು ನೀಡಲು ಸಾಧ್ಯವಾಗುತ್ತದೆ. ತಪ್ಪಿತಸ್ಥರನ್ನು ಜೈಲಿಗೂ ಕಳಿಸಬಹುದು. ಆಗ ಕಾಂಗ್ರೆಸ್ ಮುಖಂಡರ ಪ್ರಾಮಾಣಿಕತೆಯೂ ಸಾಬೀತಾಗುತ್ತದೆ. ಮೊದಲಿಗೆ ಎಂಟು ಸಾವಿರ ಕೋಟಿ ರು. ನಷ್ಟದ ವಿಚಾರದಲ್ಲಿ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
8000 ಕೋಟಿ ನಷ್ಟದ ಬಗ್ಗೆಯೂ ತನಿಖೆ ನಡೆಸಿ: ಬಿಜೆಪಿ ವಿರುದ್ಧದ ತನಿಖೆ ಜೊತೆ ಕೆಂಪಣ್ಣ ಆಯೋಗದ ವರದಿ ಆಧರಿಸಿ ಎಫ್‌ಐಆರ್ ದಾಖಲಿಸಬೇಕು. ಆಗ ಬೊಕ್ಕಸಕ್ಕೆ 8000 ಕೋಟಿ ರು. ನಷ್ಟವಾಗಲು ಹೊಣೆಗಾರರು ಯಾರು ಎಂಬುದು ತಿಳಿಯುತ್ತದೆ. ಈ ನಷ್ಟಉಂಟು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. 8000 ಕೋಟಿ ಹಣ ವಾಪಸ್ ಬರಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಬಿಜೆಪಿ ಸೋಲಿಗೆ ಹಲವು ವಿಚಾರಗಳಿವೆ: ರಾಜ್ಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಹಲವಾರು ವಿಚಾರಗಳು ಕಾರಣವಾಗಿವೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ನೂತನ ಬಿಜೆಪಿ ಶಾಸಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು. ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಿದ್ಧಗಂಗಾ ಮಠಕ್ಕೆ ಆಗಮಿಸಿ, ಹಿರಿಯ ಲಿಂ. ಡಾ.ಶಿವಕುಮಾರಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಮಠಾಧ್ಯಕ್ಷ ಸಿದ್ಧಲಿಂಗಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಆರು ಬಾರಿ ಗೆದ್ದರೂ ಸಚಿವ ಸ್ಥಾನಕ್ಕಾಗಿ ಕಾಯಬೇಕು ಮೈಸೂರು ಜಿಲ್ಲೆಯ ಮೂವರು ಶಾಸಕರು!
ಬಿಜೆಪಿ ಸೋಲಿನ ಬಗ್ಗೆ ಈಗಾಗಲೇ ಪಕ್ಷದ ಮುಖಂಡರು ಈಗಾಗಲೇ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು. ರಾಜ್ಯದಲ್ಲಿನ ಸೋಲಿನ ಕುರಿತು ಪಕ್ಷದ ಹಿರಿಯರು ವರಿಷ್ಠರು ಕುಳಿತು ಸಮಗ್ರವಾಗಿ ಅವಲೋಕನ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕು, ಪಕ್ಷವನ್ನು ಪುನರ್ ಸಂಘಟನೆ ಹೇಗೆ ಮಾಡಬೇಕು ಎಂಬುದರ ಚರ್ಚೆ ನಡೆಯಲಿದೆ. ಪಕ್ಷಕ್ಕೆ ಹಿನ್ನಡೆಯಾಗಿದೆ ಅದಕ್ಕೆ ಸಾಕಷ್ಟುಕಾರಣಗಳಿವೆ, ಕಾರಣಗಳ ಕುರಿತು ಚರ್ಚೆ ನಡೆಯಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.