ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರವಾಗಿ ಆದಷ್ಟು ಬೇಗನೇ ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗ (ಅ.01): ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರವಾಗಿ ಆದಷ್ಟು ಬೇಗನೇ ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲರನ್ನೇ ಮುಂದುವರಿಸುವುದಾದರೆ ಮುಂದುವರಿಸಲಿ. ಇಲ್ಲ ಯಾವುದಾದರೂ ತೀರ್ಮಾನ ಕೂಡಲೇ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು ಕೂಡ ಇದನ್ನೇ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ 28 ಸ್ಥಾನ ಗೆಲ್ಲಬೇಕಿದೆ. ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆ ಗಮನಿಸುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
undefined
ಕಾವೇರಿ ವಿಚಾರದಲ್ಲಿ ರೈತರ ಕತ್ತು ಕುಯ್ಯುವ ಕೆಲಸ ಮಾಡಬೇಡಿ: ಜೋಗಿ ಪ್ರೇಮ್
ಕಾವೇರಿ ನೀರು ಹರಿಸಿದ ಸಿಎಂ, ಡಿಸಿಎಂ ಕ್ಷಮೆ ಯಾಚಿಸಲಿ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಕಳ್ಳತನದಿಂದ ಬಿಡದೇ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಳ್ಳತನದಿಂದ ನೀರು ಬಿಟ್ಟಿರುವುದೇ ದೊಡ್ಡ ತಪ್ಪು. ಜನರು ಆಕ್ರೋಶಗೊಂಡ ಮೇಲೆ ಯಾರನ್ನೂ ಕೇಳದೇ ತಮಿಳುನಾಡಿಗೆ ನೀರು ಬಿಟ್ಟ ಕಳ್ಳರಿಗೆ ಬುದ್ಧಿ ಬಂದಂತೆ ಕಾಣುತ್ತಿದೆ.
ಈಗ ವಕೀಲರು, ತಜ್ಞರು ಹಾಗೂ ಹಲವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಮೊದಲು ಕಳ್ಳ ಎಂದಿದ್ದೆ, ಈಗ ದಡ್ಡರು ಎನ್ನಬೇಕಾಗಿದೆ ಎಂದು ಲೇವಡಿ ಮಾಡಿದರು. ಕಾವೇರಿ ವಿಚಾರವಾಗಿ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆ ಇರುತ್ತಿದ್ದರು. ಸ್ಟಾಲಿನ್ ಎಂಬ ಪುಣ್ಯಾತ್ಮನಿಗೆ ಒಪ್ಪಿಸಲು, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ. ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಹರಿಹಾಯ್ದರು. ಎಲ್ಲ ಆದ ಮೇಲೆ ನಾವು ಜನರ ಜೊತೆ ಇದ್ದೆವೆ ಎಂದು ಈಗ ಹೇಳುತ್ತಿದ್ದಾರೆ.
ಇದಕ್ಕಿಂತ ಅನ್ಯಾಯ ಮತ್ತೇನಿದೆ. ಹಿಂದೆ ನೀರು ಬಿಟ್ಟಿದ್ದರೂ ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಟ್ಟಿದ್ದಾರೆ, ಆದರೆ, ಇವರು ಮೊದಲು ನೀರು ಬಿಟ್ಟು ಆಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಉಪಯೋಗವೇನು ?, ಯಾರನ್ನೂ ಕೇಳದೇ ನೀರು ಬಿಟ್ಟಿದ್ದೇ ತಪ್ಪು, ಯಾರನ್ನು ಕೇಳದೆ ನೀರು ಬಿಟ್ಟು ಈಗ ಅವರು ಬರಲಿಲ್ಲ, ಇವರು ಬರಲಿಲ್ಲ ಎಂದರೆ ಹೇಗೆ? ಮೊದಲು ಚಲನಚಿತ್ರ ನಟರು ಬರಲಿಲ್ಲ ಎಂದು ಬೊಬ್ಬೆ ಹೊಡೆದರು. ಈಗ ಮೋದಿ ಬರುತ್ತಿಲ್ಲ ಎನ್ನುತ್ತಿದ್ದಾರೆ. ಪ್ರಧಾನಮಂತ್ರಿ ಮೇಲೆ ಆರೋಪ ಮಾಡುವುದೇ ಇವರ ಕೆಲಸವಾಗಿದೆ ಎಂದು ಹರಿಹಾಯ್ದರು.
ರಾಜಕೀಯ ಹಿತಕ್ಕಾಗಿ ತಮಿಳುನಾಡಿಗೆ ನೀರು, ಈಗ ಪ್ರಧಾನಿ ಮಧ್ಯ ಪ್ರವೇಶಿಸಲಿ ಎನ್ನುವುದು ಎಷ್ಟು ಸರಿ: ಚಕ್ರವತಿ ಸೂಲಿಬೆಲೆ
ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ, ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇದು ಸರಿಯಲ್ಲ. ಮುಸ್ಲಿಂ ಗೂಂಡಾಗಳು ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿದರೆ ಅದು ತಪ್ಪು.
ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡ