ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರೂ ಆಗಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಬೆಂಗಳೂರು (ಮಾ.18): ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರೂ ಆಗಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದವು? ಎರಡೂ ಪಕ್ಷಗಳ ನಡುವೆ ಚುನಾವಣಾ ಹೊಂದಾಣಿಕೆ ಏನಿತ್ತು ಎಂಬುದು ಜನರಿಗೆ ತಿಳಿದಿದೆ.
ಪಿಎಫ್‌ಐ, ಕೆಎಫ್‌ಡಿ ಮತ್ತು ಎಸ್‌ಡಿಪಿಐ ಕಾಂಗ್ರೆಸ್‌ನ ಇನ್ನೊಂದು ಮುಖ ಎಂಬುದನ್ನು ಬಹಳ ವರ್ಷಗಳಿಂದ ಹೇಳುತ್ತಲೇ ಬಂದಿದ್ದೇವೆ. ಇವು ರಾಜ್ಯದಲ್ಲಿ ಮತ್ತು ದೇಶದ ಬೇರೆ ಭಾಗಗಳಲ್ಲಿ ದೇಶವಿರೋಧಿ ಹಾಗೂ ಸಮಾಜ ವಿರೋಧಿ ಕೃತ್ಯಗಳನ್ನು ಮಾಡುತ್ತಲೇ ಇವೆ ಎಂದರು. ದೇಶದಲ್ಲಿ ಪಿಎಫ್‌ಐ ಭಯೋತ್ಪಾದನಾ ಚಟುವಟಿಕೆ ನಡೆಸುವುದು, ಭಯೋತ್ಪಾದಕತೆಗೆ ಫಂಡಿಂಗ್ ಮಾಡುವುದು, ಹಲವಾರು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿರುವುದು, ನೇತಾರರ ಹತ್ಯೆಗೆ ಸಂಚು ಮಾಡಿದ ಬಗ್ಗೆ ಸಿಕ್ಕ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್‌ಐ ನಿಷೇಧಕ್ಕೆ ಒಳಗಾಗಿದೆ.
ಮಂಡ್ಯ ಜಿಲ್ಲೆ ಜವಾಬ್ದಾರಿ ನನ್ನದೇ, ಪ್ರಚಾರದ ಉಸ್ತುವಾರಿ ನಾನೇ ವಹಿಸುವೆ: ಎಚ್.ಡಿ.ದೇವೆಗೌಡ
ಪಿಎಫ್‌ಐನ ಕಾರ್ಯಕರ್ತರು ಈಗ ಎಸ್‌ಡಿಪಿಐಗೆ ಸೇರಿದ್ದಾರೆ. ಪಿಎಫ್‌ಐನ ರಾಜಕೀಯ ಮುಖವಾಡ ಮತ್ತು ರಾಜಕೀಯ ಮುಖವಾಣಿ ಎಸ್‌ಡಿಪಿಐ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಮಾರು 116 ಕೇಸುಗಳಲ್ಲಿ ಸಿಕ್ಕಿ ಬಿದ್ದು ಬಂಧನವಾಗಿದ್ದ 1700 ಪಿಎಫ್‌ಐ ಮತ್ತು ಎಫ್‌ಡಿಎ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು ಆರೋಪಿಸಿದರು. ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆಯಿಂದ ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಪಿಎಫ್‌ಐ-ಎಸ್‌ಡಿಪಿಐಗೆ ಸಹಾಯ ಮಾಡಿರುವುದು,.
ಅವರ ಕೇಸುಗಳಿಗೆ ಬಿ ರಿಪೋರ್ಟ್ ಹಾಕಿ ಬಂಧಿತರನ್ನು ಜೈಲಿನಿಂದ ಬಿಡುಗಡೆ ಮಾಡಿರುವುದು ಸ್ಪಷ್ಟವಾಗಿದೆ. ಎಸ್‌ಡಿಪಿಐ ಜೊತೆ ಹೊಂದಾಣಿಕೆ ರಾಜಕೀಯವನ್ನು ಮಾಡಿಕೊಂಡಿರುವುದು ದೃಢಪಟ್ಟಿದೆ. ಒಂದು ಸಮುದಾಯವನ್ನು ಓಲೈಕೆ ಮಾಡಲು ಕೇಸು ರದ್ದು ಮಾಡಿರುವುದು ಗೊತ್ತಾಗಿದೆ ಎಂದರು. ಕಾಂಗ್ರೆಸ್ ಮತ್ತು ಪಿಎಫ್‌ಐಗೆ ಹಾಗೂ ಕಾಂಗ್ರೆಸ್ ಮತ್ತು ಎಸ್‌ಡಿಪಿಐಗೆ ಇರುವ ಸಂಬಂಧದ ಸತ್ಯಾಸತ್ಯತೆ ಅರ್ಥ ಆಗಬೇಕು. ಕಾಂಗ್ರೆಸ್ ಮತ್ತು ಹಳೆಯ ಪಿಎಫ್‌ಐ ಹಾಗೂ ಇವತ್ತಿನ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂಬುದು ಸಾಬೀತಾಗುತ್ತಿದೆ.
ಕಾಂಗ್ರೆಸ್‌ನದ್ದು ಪುಕ್ಕಟ್ಟೆ ಕಾರ್ಡ್: ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಲೇವಡಿ
ಅದಕ್ಕಾಗಿ ಇವತ್ತು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಸಂಬಂಧ ಕುರಿತಾಗಿ ತನಿಖೆ ಆಗಬೇಕು. ಈ ಬಗ್ಗೆ ಚರ್ಚೆಯಾಗಬೇಕು. ಜನ ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಮತ್ತು ಕಾಂಗ್ರೆಸ್‌ನ ಮಾನಸಿಕತೆ ಏನು ಎಂಬುದು ತಿಳಿಯಬೇಕು ಎಂದು ಶೋಭಾ ಹೇಳಿದರು. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ, ದೇಶದ್ರೋಹಿ ಚಟುವಟಿಕೆ ಬಲಪಡಿಸಲು ಮೂಲ ಕಾರಣ ಮತ್ತು ಕುಮ್ಮಕ್ಕು ನೀಡಿದವರು ಕಾಂಗ್ರೆಸ್‌ನವರು. ಈ ನಿಜ ಬಣ್ಣವನ್ನು ಜನರು ಜನರು ಅರ್ಥ ಮಾಡಿಕೊಳ್ಳಬೇಕು. ಉನ್ನತ ಮಟ್ಟದ ತನಿಖೆ ಆದಾಗ ನಿಜವಾದ ಅವರ ನಡುವಿನ ಸಂಬಂಧ ಹೊರಕ್ಕೆ ಬರಲಿದೆ ಎಂದು ತಿಳಿಸಿದರು.