ಹೈನೋದ್ಯಮ ಅಭಿವೃದ್ಧಿಗೆ ಸರ್ಕಾರ ಕ್ರಮಕೈಗೊಳ್ಳಲಿ: ಎಚ್‌.ಡಿ.ಕುಮಾರಸ್ವಾಮಿ ಸಲಹೆ

By Kannadaprabha NewsFirst Published Jun 15, 2023, 10:42 PM IST
Highlights

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಸಚಿವರಾದ ಎಚ್‌.ಡಿ.ರೇವಣ್ಣ ಅವರು ತಮ್ಮ ಅವಧಿಯಲ್ಲಿ ರಾಜ್ಯದ ಹೈನೋದ್ಯಮದ ಚೇತರಿಕೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 

ಚನ್ನಪಟ್ಟಣ (ಜೂ.15): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಸಚಿವರಾದ ಎಚ್‌.ಡಿ.ರೇವಣ್ಣ ಅವರು ತಮ್ಮ ಅವಧಿಯಲ್ಲಿ ರಾಜ್ಯದ ಹೈನೋದ್ಯಮದ ಚೇತರಿಕೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಸಹ ಹೈನೋದ್ಯಮದ ಸಂಕಷ್ಟವನ್ನು ಅರಿತು ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ತಾಲೂಕಿನ ಎ.ವಿ.ಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಸಾಕಷ್ಟುಮಂದಿ ರೈತರು ಇಂದು ಹೈನೋದ್ಯಮವನ್ನು ಅವಲಂಭಿಸಿ ಬದುಕು ಕಟ್ಟಿಕೊಂಡಿದ್ದಾರೆ. ನೂತನ ಸರ್ಕಾರ ಹೈನೋದ್ಯಮಿಗಳ ನೆರವಿಗೆ ಬರಬೇಕಿದ್ದು, ಅವರು ಹೈನೋದ್ಯಮದ ಅಭಿವೃದ್ಧಿಗೆ ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೋ ನೋಡೋಣ ಎಂದರು.

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ, ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ: ಸಿ.ಟಿ.ರವಿಗೆ ದಿನೇಶ್‌ ತಿರುಗೇಟು

ನಿಮ್ಮಿಂದಲೇ ಗೆಲುವು: ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಾರದಿದ್ದರೂ ಸಹ ಕ್ಷೇತ್ರದ ಜನ ತಾವೇ ಅಭ್ಯರ್ಥಿಯಂತೆ ಪ್ರಚಾರ ನಡೆಸಿದರು. ನನ್ನ ಮೇಲೆ ವಿಶ್ವಾಸವಿಟ್ಟು ಎರಡನೇ ಬಾರಿಗೆ ಕ್ಷೇತ್ರದಿಂದ ನನ್ನನ್ನು ಗೆಲ್ಲಿಸಿದರು. ಜನರ ಈ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋುಣಿಯಾಗಿದ್ದೇನೆ ಎಂದರು.

ಕಳೆದ ಬಾರಿ ಕೆಲಸದ ಒತ್ತಡದ ಕಾರಣಕ್ಕೆ ಎಷ್ಟೋ ಗ್ರಾಮಗಳಿಗೆ ಬರಲು ಆಗಿಲಿಲ್ಲ. ಆದರೆ, ನಾನು ಎಲ್ಲೇ ಇದ್ದರೂ ಎಷ್ಟೇ ಒತ್ತಡದಲ್ಲಿದ್ದರೂ ಸಹ ಕ್ಷೇತ್ರದ ಕೆಲಸ ಮಾಡುವ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿಲ್ಲ. ಕ್ಷೇತ್ರಕ್ಕೆ ಸಾಕಷ್ಟು ಬಾರಿ ಬರಲು ಆಗದಿದ್ದರೂ ಸಹ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಸಮಸ್ಯೆ ಪರಿಹರಿಸಲು ಆದ್ಯತೆ ನೀಡುತ್ತೇನೆ ಎಂದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಗಣೇಶ್‌ ಪ್ರಸಾದ್‌

ಕಾರ್ಯಕ್ರಮದಲ್ಲಿ ಬಿಡಿಸಿಸಿ ಬ್ಯಾಂಕ್‌ ನಿದೇಶಕ ಕುಕ್ಕೂರುದೊಡ್ಡಿ ಜಯರಾಮು, ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಎ.ವಿ.ಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ್‌, ಕಾರ್ಯದರ್ಶಿ ಶಿವರಾಜು, ಬಮೂಲ್‌ ಅಧಿಕಾರಿಗಳಾದ ಹೇಮಂತ್‌, ಆನಂದ್‌ ಇತರರು ಇದ್ದರು.

click me!