Karnataka Cabinet Expansion: ಹೊಸಮುಖಗಳಿಗೆ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

By Kannadaprabha News  |  First Published Dec 30, 2021, 4:46 AM IST

*  ಎರಡ್ಮೂರು ಬಾರಿ ಸಚಿವರಾಗಿದ್ದವರು ರಾಜೀನಾಮೆ ನೀಡಲಿ
*  ಗುಜರಾತ್‌ ಮಾದರಿಯಲ್ಲಿ ಸಂಪುಟ ವಿಸ್ತರಣೆ ಮಾಡಬೇಕು 
*  ನನಗೆ ಸಚಿವನಾಗುವ ಆಸೆ ಇಲ್ಲ


ಹುಬ್ಬಳ್ಳಿ(ಡಿ.30): ಬಿಜೆಪಿ ಸರ್ಕಾರದಲ್ಲಿ ಎರಡು- ಮೂರು ಬಾರಿ ಸಚಿವರಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ(MP Renukacharya) ಹೇಳಿದ್ದಾರೆ. 

ಗುಜರಾತ್‌(Gujarat) ಮಾದರಿಯಲ್ಲಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಾರ್ಯಕಾರಿಣಿ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕುರಿತು ನಾವು ಪಕ್ಷದ ವರಿಷ್ಠರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ನನಗೆ ಸಚಿವನಾಗುವ(Minister) ಆಸೆ ಇಲ್ಲ. ಅದರ ಬಗ್ಗೆ ಅಪೇಕ್ಷಯೂ ಇಲ್ಲ. ನನಗೆ ಶಾಸಕ ಸ್ಥಾನದಲ್ಲಿ ತೃಪ್ತಿ ಇದೆ. ಬಿಜೆಪಿಯನ್ನು(BJP) ಗೆಲ್ಲಿಸಿಕೊಂಡು ಬರುವ ಕೆಲಸವನ್ನು ಹಿರಿಯರು ಮಾಡಬೇಕು. ಅಧಿಕಾರ ಅನುಭವಿಸಿದ ನಾಯಕರು ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ತಿಳಿಸಿದರು. ನನಗೇ ಸಚಿವ ಸ್ಥಾನ ಕೊಡಬೇಕೆಂದಿಲ್ಲ. ಯಾರಿಗೆ ಬೇಕಾದರೂ ಸಚಿವ ಸ್ಥಾನ ನೀಡಲಿ. ಹೊಸ ಮುಖಗಳಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಅವರು ಹೇಳಿದರು.

Tap to resize

Latest Videos

Hubballi BJP Meeting: ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಹತ್ಯೆ: ಅರುಣ್ ಸಿಂಗ್

ರಾಜೀನಾಮೆ ಕೇಳಿದ್ರೆ ಕೊಡಲು ಸಿದ್ಧ; ಈಶ್ವರಪ್ಪ

ಪಕ್ಷವು ರಾಜೀನಾಮೆ ಕೇಳಿದರೆ ಧಾರಾಳವಾಗಿ ಬಿಟ್ಟುಕೊಡಲು ತಯಾರಾಗಿದ್ದೇವೆ. ನನ್ನನ್ನು ತೆಗೆಯೋದಿದ್ದರೆ ನಾನು ಸಹ ತಯಾರಿದ್ದೇನೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa) ತಿಳಿಸಿದ್ದಾರೆ. 
ಹಿರಿಯರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನದಿಂದ ಕೆಳಗಿಳಿದು ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೇದು ಕೆಟ್ಟದು ಎಂಬುದು ನಮಗೆ ಗೊತ್ತಿದೆ ಎಂದರು. ಇನ್ನು ಶಿವಮೊಗ್ಗದಲ್ಲಿ(Shivamogga) ಮುಂದಿನ ಹಿಂದುಳಿದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆಗಳ(Election) ಬಗ್ಗೆ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಕಾರ್ಯಕಾರಣಿ ಸಭೆಯಲ್ಲಿ ಮೊದಲ ವಿಕೆಟ್ ಪತನ

ಬಿಜೆಪಿ ಕಾರ್ಯಕಾರಿಣಿಯ (BJP Executive Meeting) 2ನೇ ದಿನ ಸಭೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೌದು...ಕಾರ್ಯಕಾರಿಣಿಯಲ್ಲಿ ಬಿಸಿಯೇರಿದ ರಾಜಕೀಯ ಚರ್ಚೆಗಳೂ ನಡುವೆ ಅರವಿಂದ್ ಬೆಲ್ಲದ್ (Aravind Bellad) ರೂಪದಲ್ಲಿ ಮೊದಲ ವಿಕೆಟ್ ಬಿದ್ದಿದೆ.

ಶಾಸಕ ಅರವಿಂದ್ ಬೆಲ್ಲದ್ (Arvind Bellad) ಹುಬ್ಬಳ್ಳಿ - ಧಾರವಾಡ(Hubballi Dharwad) ಮಹಾನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿಯಲ್ಲಿಯೇ ಅರವಿಂದ್ ಬೆಲ್ಲದ್ ರಾಜೀನಾಮೆ ಘೋಷಿಸಿದ್ದು, ಮಹಾನಗರ ಘಟಕ ಅಧ್ಯಕ್ಷ ಸ್ಥಾನದಿಂದ ವಿಮುಕ್ತಿ ಮಾಡಿ ಎಂದು ಶಾಸಕ ಅರವಿಂದ ಬೆಲ್ಲದ್ ಮನವಿ ಮಾಡಿಕೊಂಡಿದ್ದಾರೆ.

BJP Meeting: ಬಿಜೆಪಿ ಕಾರ್ಯಕಾರಣಿ ಸಭೆ ಮಾಹಿತಿ ಬಿಚ್ಚಿಟ್ಟ ಯತ್ನಾಳ್, ಬೊಮ್ಮಾಯಿ ಸೇಫ್...!

ವಿಧಾನ ಪರಿಷತ್ ಚುನಾವಣೆ ವಿಚಾರದಲ್ಲಿ ಶೆಟ್ಟರ್ ಅಸಮಾಧಾನಗೊಂಡಿದ್ದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ಧಾರವಾಡ ದ್ವಿಸದಸ್ಯತ್ವ ವಿಧಾನಪರಿಷತ್ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಕಾಂಗ್ರೆಸ್‌ನ ಸಲೀಂ ಅಹ್ಮದ್ ಮೊದಲ ಪ್ರಾಶಸ್ತ್ಯ ಮತಗಳಲ್ಲಿ ಜಯಗಳಿಸಿದ್ರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್, ಎರಡನೇ ಪ್ರಾಶಸ್ತ್ಯ ಮತದಲ್ಲಿ ಗೆಲುವು ಸಾಧಿಸಿದ್ದರು. 

ಇದು ಬಿಜೆಪಿ ನಾಯಕರಲ್ಲಿ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ, ಧಾರವಾಡ ಅಂದ್ರೆ ಬಿಜೆಪಿಯ ಭದ್ರಕೋಟೆ ಅನ್ನೋ ಮಾತಿದೆ. ಶೆಟ್ಟರ್ ಹಾಗೂ ಜೋಷಿಯಂತಹ ಘಟಾನುಘಟಿ ನಾಯಕರು ಇದ್ದರೂ ಸಹ ಬಿಜೆಪಿ ಎರಡನೇ ಪ್ರಾಶಸ್ತ್ಯದಲ್ಲಿ ಗೆದ್ದಿರುವುದು ಶಾಕ್ ಆಗಿದೆ.

ಇದರಿಂದಾಗಿ ತೀವ್ರ ಬೇಸರಗೊಂಡಿದ್ದ ಮಾಜಿ ಜಗದೀಶ್ ಶೆಟ್ಟರ್, ದೆಹಲಿಗೆ ತೆರಳಿ ಹೈಕಮಾಂಡ್ ಗೂ ದೂರು ನೀಡೋಕೆ ಮುಂದಾಗಿದ್ದರು. ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿಯಾಗಿ ದೂರು ನೀಡೋಕೆ ಗಂಭೀರ ಚಿಂತನೆ ನಡೆಸಿದ್ದರು. ಅರವಿಂದ್ ಬೆಲ್ಲದ್ ವಿರುದ್ಧ ದೂರು ಕೊಡಲು ಮುಂದಾಗಿದ್ದರು ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಅರವಿಂದ್ ಬೆಲ್ಲದ್ ಬಿಜೆಪಿ ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 

click me!