ಪಂಚಮಸಾಲಿ ಸಮಾಜ ಬಿಜೆಪಿ ಬೆಂಬಲಿಸಲಿ: ಯತ್ನಾಳ

By Kannadaprabha News  |  First Published May 6, 2023, 11:29 PM IST

ಈ ಬಾರಿ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಗ್ಯಾರಂಟಿ. ಇಲ್ಲಿ ಬಂದಿರುವ ಎಲ್ಲ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಜಿಲ್ಲೆಯ 8 ಕ್ಷೇತ್ರಗಳಲ್ಲಿ ನಿಮ್ಮ ಸಂಬಂಧಿಕರಿಗೆ ಬಿಜೆಪಿ ಮತ ಹಾಕಿ ಕಮಲ ಅರಳುವಂತೆ ಮಾಡಬೇಕು. ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದರೆ ಎಲ್ಲ ಮೀಸಲಾತಿ ರದ್ದು ಮಾಡುತ್ತೇನೆ ಎಂದು ಹೇಳಿದ್ದಾರೆ. ಇಂಥವರಿಂದ ರಾಜ್ಯದ ಜನರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ: ಯತ್ನಾಳ 


ಇಂಡಿ(ಮೇ.06):  ಬಿಜೆಪಿ ಸರ್ಕಾರ ಮೀಸಲಾತಿ ನೀಡುವಲ್ಲಿ ಯಾವುದೇ ಸಮಾಜಕ್ಕೆ ಅನ್ಯಾಯ ಮಾಡಿಲ್ಲ. ಸಂವಿಧಾನ ಬದ್ಧವಾಗಿ ಎಲ್ಲ ಸಮುದಾಯಕ್ಕೆ ಸಾಮಾಜಿಕ ನ್ಯಾಯದಡಿಯಲ್ಲಿ ಮೀಸಲಾತಿ ಒದಗಿಸಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಪಾದಯಾತ್ರೆ ಮಾಡಿದ್ದರ ಫಲವಾಗಿ ಇಂದು ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಸಂವಿಧಾನ ಬದ್ಧ ಮೀಸಲಾತಿ ನೀಡಿದೆ. ಹೀಗಾಗಿ ಪಂಚಮಸಾಲಿ ಸಮುದಾಯ ಬಿಜೆಪಿ ಬೆಂಬಲಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿಮಂಗಲ ಕಾರ್ಯಾಲಯದ ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರ ಚುನಾವಣಾ ಪ್ರಚಾರ ನಿಮಿತ್ತ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಇಂಡಿಯನ್ನು ಜಿಲ್ಲೆ ಮಾಡುತ್ತೇನೆ, ಸಾಲೋಟಗಿಯನ್ನು ತಾಲೂಕು ಮಾಡುತ್ತೇನೆ ಎಂದು ಇಲ್ಲಿನ ಶಾಸಕ ಹೇಳುತ್ತ ಹೊರಟಿದ್ದಾರೆ. ಅದೆಲ್ಲ ಬರೀ ಸುಳ್ಳು, ಅವರು ಒಳಗೊಳಗೆ ಸಮಾಜಗಳನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Tap to resize

Latest Videos

ಆಂಜನೇಯನನ್ನು ಕೆಣಕಿ ತಪ್ಪು ಮಾಡಿದ ಕಾಂಗ್ರೆಸ್‌: ಶೃತಿ

ಈ ಬಾರಿ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಗ್ಯಾರಂಟಿ. ಇಲ್ಲಿ ಬಂದಿರುವ ಎಲ್ಲ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಜಿಲ್ಲೆಯ 8 ಕ್ಷೇತ್ರಗಳಲ್ಲಿ ನಿಮ್ಮ ಸಂಬಂಧಿಕರಿಗೆ ಬಿಜೆಪಿ ಮತ ಹಾಕಿ ಕಮಲ ಅರಳುವಂತೆ ಮಾಡಬೇಕು. ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದರೆ ಎಲ್ಲ ಮೀಸಲಾತಿ ರದ್ದು ಮಾಡುತ್ತೇನೆ ಎಂದು ಹೇಳಿದ್ದಾರೆ. ಇಂಥವರಿಂದ ರಾಜ್ಯದ ಜನರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ. ಇಂಡಿ ಮತಕ್ಷೇತ್ರದ ಕಾಂಗ್ರೆಸ್‌ ಶಾಸಕ 10 ವರ್ಷ ಅಧಿಕಾರ ಮಾಡಿದ್ದು ಸಾಕು. ಈ ಬಾರಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರಿಗೆ ಮತ ನೀಡಿ ಇಂಡಿಯಲ್ಲಿ ಕಮಲ ಅರಳಿಸಬೇಕು ಎಂದು ಮನವಿ ಮಾಡಿದರು.

ಕಾಸುಗೌಡ ಬಿರಾದಾರ ಗೆದ್ದು ಬಂದರೆ ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪಿಸಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್‌ಗೆ ಕರ್ನಾಟಕದ ನೀರಾವರಿ ಅಭಿವೃದ್ಧಿ ಅರಿವಿಲ್ಲ: ಎಂ.ಬಿ.ಪಾಟೀಲ

ಇದೇ ಸಂದರ್ಭದಲ್ಲಿ ಜೆಡಿಎಸ್‌ ಅಭ್ಯರ್ಥಿ ಬಿ.ಡಿ.ಪಾಟೀಲರನ್ನು ಹೊಗಳಿದ ಯತ್ನಾಳ, ಬಿ.ಡಿ.ಪಾಟೀಲ ಸಂಭಾವಿತ ಬಡ ಮನುಷ್ಯ. ಆದರೆ, ಅವರ ಹತ್ತಿರ ಇರುವ ಕೆಲವರು ಅವರನ್ನು ಹಾಳು ಮಾಡುತ್ತಾರೆ ಎಂಬ ಸಂಶಯ ಇದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಬಿಜೆಪಿ ಮುಖಂಡರಾದ ಶೀಲವಂತ ಉಮರಾಣಿ, ಶಂಕರಗೌಡ ಪಾಟೀಲ, ದಯಾಸಾಗರ ಪಾಟೀಲ, ಅನೀಲ ಜಮಾದಾರ, ಮುತ್ತು ದೇಸಾಯಿ, ಸಿದ್ದಲಿಂಗ ಹಂಜಗಿ ಮಾತನಾಡಿದರು.

ಹಣಮಂತ್ರಾಯಗೌಡ ಪಾಟೀಲ, ದತ್ತಾ ಬಂಡೆನವರ, ಮಲ್ಲು ವಾಲಿಕಾರ, ಗಣಪತಿ ಬಾಣಿಕೋಲ, ರಮೇಶ ಧರೆನವರ, ಜಾರ್ಖಂಡ ಸಚಿವ ರಾವತ್‌, ಬಾಳು ಮುಳಜಿ, ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ರಾಜಶೇಖರ ಯರಗಲ್ಲ, ಚನ್ನುಗೌಡ ಪಾಟೀಲ, ಶ್ರೀಮಂತ ಮೊಗಲಾಯಿ, ಸೋಮು ದೇವರ, ಪ್ರಸಾದ ಏಳಗಿ, ವಿಜಯಲಕ್ಷ್ಮಿ ರೂಗಿಮಠ, ಸುನಂದಾ ಗಿರಣಿವಡ್ಡರ ಇತರರು ಈ ಸಂದರ್ಭದಲ್ಲಿ ಇದ್ದರು.

click me!