ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡೋಣ: ಬಿ.ಎಸ್.ಯಡಿಯೂರಪ್ಪ

By Kannadaprabha News  |  First Published Dec 14, 2023, 2:18 PM IST

ಬಿ.ಎಸ್.ಯಡಿಯೂರಪ್ಪ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಪಕ್ಷಕ್ಕೆ ಒಳ್ಳೆಯದಾಗುವುದಿದ್ದರೆ ಮಾಧ್ಯಮಗಳ ಜೊತೆ ಮಾತಾಡಿ, ಇಲ್ಲ ಅಂದರೆ ಏನು ಮಾತಾಡಬೇಡಿ. ನಾವೆಲ್ಲರೂ ಸೇರಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ ಎಂದು ಸಲಹೆ ನೀಡಿದರು.


ಬೆಳಗಾವಿ (ಡಿ.14): ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ವಿಜಯಶಾಲಿಯಾಗಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು. ಅಲ್ಲದೆ, ಜಮ್ಮು ಕಾಶ್ಮೀರದ 370ನೇ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಆದೇಶ ಸ್ವಾಗತಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೆ ವೇಳೆ ಅಭಿನಂದಿಸಲಾಯಿತು. ನಂತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಪಕ್ಷಕ್ಕೆ ಒಳ್ಳೆಯದಾಗುವುದಿದ್ದರೆ ಮಾಧ್ಯಮಗಳ ಜೊತೆ ಮಾತಾಡಿ, ಇಲ್ಲ ಅಂದರೆ ಏನು ಮಾತಾಡಬೇಡಿ. ನಾವೆಲ್ಲರೂ ಸೇರಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಈ ನಿಟ್ಟಿನಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಿ ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡೋಣ. ನಾವು ಒಗ್ಗಟ್ಟಾಗಿ ಚುನಾವಣೆ ಎದುರಿಸಿ 28 ಸ್ಥಾನ ಗೆಲ್ಲಿಸಲು ಕೆಲಸ ಮಾಡೋಣ. ಸದನದಲ್ಲಿ ಸರ್ಕಾರದ ವಿರುದ್ಧ ಪರಿಣಾಮಕಾರಿ ಹೋರಾಟ ಮಾಡಬೇಕು. ಮುಸ್ಲಿಂ ಸಮಾಜಕ್ಕೆ ₹10 ಸಾವಿರ ಕೋಟಿ ಕೊಡುವವರು ರೈತರಿಗೆ ಯಾಕೆ ಹಣ ಕೊಡಲ್ಲ ಎಂಬುದರ ಬಗ್ಗೆ ಪ್ರಶ್ನೆ ಮಾಡಬೇಕು. ಸಣ್ಣ ಪುಟ್ಟ ವ್ಯತ್ಯಾಸ ಸರಿಪಡಿಸಿಕೊಂಡು ಸದನದಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಪಕ್ಷದ ಶಾಸಕರಿಗೆ ಸೂಚಿಸಿದರು.

Tap to resize

Latest Videos

ಬೆಳಗಾವಿ ಅಧಿವೇಶನ ವಿಫಲಕ್ಕೆ ವಿಪಕ್ಷ ಬಿಜೆಪಿ ಕಾರಣ: ಆಯನೂರು ಮಂಜುನಾಥ್‌

ಪಕ್ಷದ ಸಿಎಲ್‌ಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ, ಆರ್ಟಿಕಲ್ 370ನೇ ವಿಧಿ ರದ್ದು ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸಿದ್ದೇವೆ. ಡಿ.13 ರಂದು ಸರ್ಕಾರದ ವೈಫಲ್ಯ ಖಂಡಿಸಿ ರೈತರ ಹೋರಾಟವಿದೆ. ನಮ್ಮ ರಾಜ್ಯದಲ್ಲಿ ಹಣಕಾಸು ತೊಂದರೆ ಇಲ್ಲವೆಂದು ಮುಖ್ಯಮಂತ್ರಿ ಹೇಳುತ್ತಾರೆ. ಆದರೆ, ರೈತರಿಗೆ ಬರದ ವಿಚಾರದಲ್ಲಿ ನೆರವಿಗೆ ಬರುತ್ತಿಲ್ಲ. ಅಲ್ಪಸಂಖ್ಯಾತರಿಗೆ ₹ 10 ಸಾವಿರ ಕೋಟಿ ಕೊಡುತ್ತೇವೆ ಎನ್ನುತ್ತಾರೆ ಎಂದರು. ವಿಕಸಿತ ಭಾರತ ಎಂಬ ಅಭಿಯಾನ ನಡೆಯುತ್ತಿದೆ. ಅಧಿವೇಶನ ಮುಗಿದ ಬಳಿಕ ಎಲ್ಲ ಶಾಸಕರು ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ವಿರುದ್ದ ಸಂಘಟಿತ ವಾಗಿ ಹೋರಾಡಲು ತೀರ್ಮಾನಿಸಲಾಗಿದೆ ಎಂದರು.

ಜಮೀರ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ ತೀರ್ಮಾನ: ಸ್ವೀಕರ್‌ ಬಗ್ಗೆ ಸಚಿವ ಜಮೀರ ಅಹ್ಮದ ನೀಡಿದ ಹೇಳಿಕೆ ವಿಚಾರದಲ್ಲಿ ಸದನದಲ್ಲಿ ಹೋರಾಟ ತೀವ್ರಗೊಳಿಸಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ, ಶಾಸಕಾಂಗ ಪಕ್ಷದ ಸಭೆಗೆ ಅತೃಪ್ತ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಎಸ್‌.ಟಿ.ಸೋಮಶೇಖರ ಸೇರಿದಂತೆ ಪ್ರಮುಖ ನಾಯಕರು ಗೈರಾಗುವ ಮೂಲಕ ಪಕ್ಷದ ನಾಯಕರಿಗೆ ನಮ್ಮ ದಾರಿ ನಮಗೆ ಎಂಬ ಸಂದೇಶ ನೀಡಿದರು.

ಯತ್ನಾಳ್‌ ಬೀದಿಯಲ್ಲಿ ಮಾತಾಡಿ ಉತ್ತರ ಕುಮಾರ ಆಗೋದು ಬೇಡ: ಈಶ್ವರಪ್ಪ

ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದೆ. ಬರ ಪರಿಹಾರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಕುರಿತು ಸನದಲ್ಲಿ ಹೋರಾಟ ಮಾಡಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಪ್ರಮುಖ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

click me!