ಕರ್ನಾಟಕ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪುತ್ರನಿಗೆ ಜೀವ ಬೆದರಿಕೆ ಕರೆ ಬಂದಿದೆ.
ಬೆಂಗಳೂರು, (ಜೂನ್. 09): ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆಗೆ ಅಪರಿಚಿತರು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ.
ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರು ಇಂದು (ಮಂಗಳವಾರ) ಡಿಜಿಪಿ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
ರಾಜ್ಯಸಭಾ ಎಲೆಕ್ಷನ್: ಖರ್ಗೆ ನಾಮಪತ್ರ ಸಲ್ಲಿಕೆಗೂ ನಡೀತು ಮಹತ್ವದ ಸಭೆ
ಭಾನುವಾರ ಮಲ್ಲಿಕಾರ್ಜುನ ಖರ್ಗೆಯವರ ಸದಾಶಿವ ನಗರದ ನಿವಾಸಕ್ಕೆ ರಾತ್ರಿ ದೂರವಾಣಿ ಕರೆ ಮಾಡಿ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಅಲ್ಲದೇ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ. ಅದೇ ದಿನ ರಾತ್ರಿ ಒಂದು ಗಂಟೆ ಸುಮಾರಿಗೆ ಪ್ರಿಯಾಂಕ್ ಖರ್ಗೆಯವರಿಗೂ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಲಾಗಿದೆ.
ಈ ಬಗ್ಗೆ ಬೆದರಿಕೆ ಕರೆ ಮಾಡಿರಿವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.