Karnataka Cabinet Expansion: ಏ. 29ರಂದು ಸಿಎಂ ದಿಲ್ಲಿ ಭೇಟಿ: ಸಂಪುಟ ಬಗ್ಗೆ ಚರ್ಚೆ ಸಾಧ್ಯತೆ

By Girish Goudar  |  First Published Apr 23, 2022, 6:43 AM IST

*   ಸಿಎಂಗಳ ಸಮ್ಮೇಳನದಲ್ಲಿ ಭಾಗಿ
*  ಪಕ್ಷದ ವರಿಷ್ಠರು ಭೇಟಿಗೆ ಸಮಯ ನೀಡಿದರೆ ಸಂಪುಟದ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ
*  ವರಿಷ್ಠ ನಾಯಕರು ಕರೆದಾಗ ದೆಹಲಿಗೆ ಹೋಗುತ್ತೇನೆ ಎಂದಿದ್ದ ಸಿಎಂ 


ಬೆಂಗಳೂರು(ಏ.23):   ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್‌ಗಳ ಮುಖ್ಯ ನ್ಯಾಯಾಧೀಶರ ಸಮ್ಮೇಳನದ ಹಿನ್ನೆಲೆಯಲ್ಲಿ ಇದೇ ತಿಂಗಳ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ದೆಹಲಿಗೆ ತೆರಳಲಿದ್ದಾರೆ.

ಸಮ್ಮೇಳನ 30ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಉದ್ಘಾಟಿಸಲಿದ್ದಾರೆ. ಹಿಂದಿನ ದಿನವೇ ಬೊಮ್ಮಾಯಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯ ವೇಳೆ ಬೊಮ್ಮಾಯಿ ಅವರು ಸಂಪುಟ(Cabinet Expansion) ಕಸರತ್ತಿನ ಬಗ್ಗೆ ಪಕ್ಷದ ವರಿಷ್ಠರು ಭೇಟಿಗೆ ಸಮಯ ನೀಡಿದರೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

Tap to resize

Latest Videos

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

ಸಂಪುಟ ಕಸರತ್ತಿನ ಬಗ್ಗೆ ಚರ್ಚಿಸಲು ಪಕ್ಷದ ವರಿಷ್ಠ ನಾಯಕರು ಕರೆದಾಗ ದೆಹಲಿಗೆ ಹೋಗುತ್ತೇನೆ ಎಂಬುದಾಗಿ ಈಗಾಗಲೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ, ಈ ದೆಹಲಿ ಭೇಟಿ ವೇಳೆ ಸಂಪುಟ ಬಗ್ಗೆ ಸಮಾಲೋಚನೆ ನಡೆಸಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್‌ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ. ಯುವ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಹೈಕಮಾಂಡ್ ನಿರ್ಧರಿಸಿದೆ. 

ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್‌ ಪ್ಲಾನ್‌ ಹೆಣೆದಿದೆ. 2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದಾರೆ. 
 

click me!